ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ಮುಗಿಸಲು ಆದೇಶ
ಹೊಸದಿಲ್ಲಿ, ಜುಲೈ 7: ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ಮುಗಿಸಲು ವಿಶ್ವವಿದ್ಯಾಲಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ. ಯುಜಿಸಿ ಮಾರ್ಗಸೂಚಿಗಳು ಮತ್ತು ಕೇಂದ್ರದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್(ಎಸ್‌ಒಪಿ) ನಿಯಮಗಳ ಅಡಿಯಲ್ಲಿ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಸೆಪ್ಟೆಂಬರ್ ಅಂತ್ಯದೊಳಗೆ ನಡೆಯಬೇಕು ಎಂದು ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.
ಗೃಹ ಸಚಿವಾಲಯವು ಉನ್ನತ ಶಿಕ್ಷಣ ಇಲಾಖೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೂಚಿಸುವ ಸುರಕ್ಷಾ ಕ್ರಮಗಳೊಂದಿಗೆ ಪರೀಕ್ಷೆ ಆಯೋಜಿಸಬೇಕು ಎಂದು ಪತ್ರ ಬರೆದಿತ್ತು.
ಯುಜಿಸಿ ಮಾರ್ಗಸೂಚಿಗಳು
– ಪೆನ್ ಮತ್ತು ಕಾಗದ ಅಥವಾ ಆನ್‌ಲೈನ್ ಅಥವಾ ಆಫ್‌ಲೈನ್ ಎಂಬ ಮೂರು ವಿಧಾನಗಳ ಪೈಕಿ ಯಾವುದು ಸಾಧ್ಯವೋ ಅದರಂತೆ ಪರೀಕ್ಷೆಯನ್ನು ನಡೆಸುವುದು.
– ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗೆ , ವಿಶೇಷ ಪರೀಕ್ಷೆ ಎಂಬ ಅವಕಾಶವನ್ನು ನೀಡಬೇಕು
– 2019-20ನೇ ಶೈಕ್ಷಣಿಕ ಸಾಲಿಗೆ ಮಾತ್ರ ಈ ಮಾರ್ಗಸೂಚಿಗಳು ಅನ್ವಯಿಸುತ್ತದೆ.
– ಸೆಮಿಸ್ಟರ್/ವಾರ್ಷಿಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2020ರ ಏಪ್ರಿಲ್ 29ರಂದು ಹೊರಡಿಸಿರುವ ಮಾರ್ಗಸೂಚಿಯಲ್ಲಿ ಬದಲಾವಣೆಗಳು ಇಲ್ಲ








