National: ಏಪ್ರಿಲ್ 21 ಕ್ಕೆ ಭಾರತಕ್ಕೆ ಆಗಮಿಸಲಿರುವ ಬ್ರಿಟನ್ ಪ್ರಧಾನಿ

1 min read
Britain Saaksha Tv

ಏಪ್ರಿಲ್ 21 ಕ್ಕೆ ಭಾರತಕ್ಕೆ ಆಗಮಿಸಲಿರುವ ಬ್ರಿಟನ್ ಪ್ರಧಾನಿ

ನವದೆಹಲಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್  ಏಪ್ರಿಲ್ 21 ರಂದು ಭಾರತಕ್ಕೆ ಆಗಮಿಸಲಿದ್ದಾರೆ.

ಕೊರೊನಾ ಕಾರಣದಿಂದ 2 ಸಲ ಅವರು ಭಾರತಕ್ಕೆ ಭೇಟಿ ನೀಡುವುದು ರದ್ದಾಗಿತ್ತು. ಈಗ ಏಪ್ರಿಲ್ 21 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಬ್ರಿಟನ್ ಪ್ರಧಾನಿ ಕಚೇರಿ ಹೇಳಿಕೆ ನೀಡಿದೆ.

ಭಾರತಕ್ಕೆ ಭೇಟಿ ನೀಡಲಿರುವ ಅವರು ಮೊದಲಿಗೆ ಗುಜರಾತ್‌ ಅಹಮದಾಬಾದ್‌ಗೆ ಆಗಮಿಸಲಿದ್ದು, ನಂತರ ಪ್ರಧಾನಿ ಮೋದಿ ಅವರೊಂದಿಗೆ ನವದೆಹಲಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ, ಇಂಡೋ-ಪೆಸಿಫಿಕ್ ವಲಯದಲ್ಲಿ ಪಾಲುದಾರಿಕೆ ಮತ್ತು ಭದ್ರತಾ ಸಹಕಾರ ಮುಂತಾದ ವಿಷಯಗಳು ಚರ್ಚೆಗೆ ಒಳಗಾಗಲಿವೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಹೇಳಿಕೆ ನೀಡಿದ ಬ್ರಿಟನ್ ಪ್ರಧಾನಿ ‘ನನ್ನ ಭಾರತ ಭೇಟಿಯು ಉಭಯ ರಾಷ್ಟ್ರಗಳ ಜನರಿಗೆ ಅತ್ಯಂತ ಮುಖ್ಯವಾಗಿರಲಿದೆ ಎಂದು ಭಾವಿಸುತ್ತೇನೆ. ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆಯಿಂದ ಇಂಧನ ಭದ್ರತೆ ಮತ್ತು ರಕ್ಷಣೆಯವರೆಗೆ ನಾವು ಚರ್ಚೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಮತ್ತು ನಾನು ಉಕ್ರೇನ್‌ನಲ್ಲಿನ ಗಂಭೀರ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದೇವೆ. ಉಕ್ರೇನ್​ನ ಸಾರ್ವಭೌಮತ್ವವನ್ನು ಗೌರವಿಸಬೇಕು ಎಂದು ಇಬ್ಬರೂ ಒಪ್ಪಿಕೊಂಡಿದ್ದೇವೆ. ಯುಕೆ-ಭಾರತ ಸಂಬಂಧವು ದಿನದಿಂದ ದಿನಕ್ಕೆ ಪ್ರಬಲವಾಗುತ್ತಿದೆ. ಮುಂಬರುವ ದಿನಗಳಲ್ಲಿ ನಾವು ನಮ್ಮ ವ್ಯಾಪಾರ, ಭದ್ರತೆ ಮತ್ತು ವ್ಯಾಪಾರ ಸಂಬಂಧಗಳನ್ನು ಮತ್ತಷ್ಟು ಉನ್ನತಗೊಳಿಸುತ್ತೇವೆ ಎಂದು ಟ್ವೀಟ್​  ಮಾಡಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd