Ukraine : ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್
ಇಸ್ರೇಲಿ ಪ್ರಧಾನಿ ನಫ್ತಾಲಿ ಬೆನೆಟ್ ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ನಂತರ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಮಾಸ್ಕೋದಲ್ಲಿ ಶನಿವಾರ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಭೇಟಿ ಮಾಡಿ ಉಕ್ರೇನ್ ಬಿಕ್ಕಟ್ಟಿನ ಕುರಿತು ಮಾತನಾಡಿದ್ದರು.
ಬೆನೆಟ್ ಮತ್ತು ಪುಟಿನ್ ನಡುವಿನ ಸಭೆಯು ಸುಮಾರು ಮೂರು ಗಂಟೆಗಳ ಕಾಲ ನಡೆದಿದ್ದು, ಉಕ್ರೇನ್ನಲ್ಲಿನ ಬಿಕ್ಕಟ್ಟು ಯಹೂದಿ ಸಮುದಾಯದ ಮೇಲೆ ಹೇಗೆ ಪರಿಣಾಮ ಬೀರಿದೆ ಎಂಬುದನ್ನು ಬೆನೆಟ್ ಚರ್ಚಿಸಿದ್ದಾರೆ ಎಂದು ಇಸ್ರೇಲಿ ಅಧಿಕಾರಿ ಹೇಳಿದ್ದಾರೆ. ಇಸ್ರೇಲಿ ಪ್ರಧಾನಿ ನಫ್ತಾಲ್ಲಿ ಬೆನೆಟ್ ಅವರು ಉಕ್ರೇನ್ ಬಿಕ್ಕಟ್ಟಿನ ಕುರಿತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಲು ಮಾಸ್ಕೋಗೆ ರಹಸ್ಯವಾಗಿ ಪ್ರಯಾಣಿಸಿದ್ದರು. ಮಾಸ್ಕೋಗೆ ಭೇಟಿ ನೀಡುವ ಮೊದಲು ಇಸ್ರೇಲಿ ಪ್ರಧಾನಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ಮಾತುಕತೆ ನಡೆಸಿದ್ದರು.