ಉಕ್ರೇನ್ ಸ್ಥಿತಿ ಶೋಚನೀಯ
ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದು ಉಕ್ರೇನ್ ಸ್ಥಿತಿ ಭೀಭತ್ಸವಾಗಿದೆ… ಉಕ್ರೇನ್ ನಲ್ಲಿ ಭಾರಪತೀಯರೂ ಅದ್ರಲ್ಲೂ ಕರ್ನಾಟಕದ ವಿದ್ಯಾರರ್ಥಿಗಳು ಸಿಲುಕಿಕೊಂಡು ನೆರವಿನ ನಿರೀಕ್ಷೆಯಯಲ್ಲಿದ್ದಾರೆ… ಅದದ್ರಲ್ಲೂ ಅನೇಕರು ಬಾಂಬ್ ಪ್ರೊಟೆಕ್ಟರ್ ಇರುವ ಕಾರಣಕ್ಕೆ ಮೆಟ್ರೋಗಳಲ್ಲಿ ಉಳಿದುಕೊಂಡಿದ್ದಾರೆ.. ಆದ್ರೆ ಆಹಾರ ನೀರಿಗೆ ತೊಂದರೆ ಅನುಭವಿಸುತ್ತಿದ್ದಾರೆ..
ಉಕ್ರೇನ್ ನಿಂದ ಕರ್ನಾಟಕ ವಿದ್ಯಾರ್ಥಿಗಳ ಸೆಲ್ಫಿ ವಿಡಿಯೋ
ಉಕ್ರೇನ್ ನಲ್ಲಿ ಕರ್ನಾಟಕ ಮೂಲದವರು ಸಿಲುಕಿದ್ದು , ಭಾರತ ಸರ್ಕಾರ ನೆರವಿಗಾಗಿ ಕಾಯುತ್ತಿದ್ದಾರರೆ… ಚಾಮರಾಜನಗರ , ಮಂಡ್ಯ , ರಾಯಚೂರು , ತುಮಕೂರು , ವಿಜಯನಗರ , ಕಲಬುರಗಿ , ತುಮಕೂರು, ಗದಗ , ಬಾಗಲಕೋಟೆ ಇನ್ನೂ ಕರ್ನಾಟಕದ ಮೂಲೆ ಮೂಲೆಯಿಂದ ಉಕ್ರೇನ್ ಗೆ ವಿದ್ಯಾಭ್ಯಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಅಲ್ಲಿಂದ ಸೆಲ್ಫಿ ವಿಡಿಯೋಗಳನ್ನ ಮಾಡುತ್ತಾ ಸಹಾಯಕ್ಕಾಗಿ ಮನವಿ ಮಾಡಿದ್ದು , ತಮ್ಮ ಪರಸ್ಥಿತಿಗಳ ಬಗ್ಗೆ ವಿವರಿಸಿದ್ದಾರೆ.. ತುಮಕೂರಿನ ವೇಣು , ಚಾಮರಾಜನಗರದ ಕಾವ್ಯ , ಚಂದನ್ ಗೌಡ ವಿದ್ಯಾರ್ಥಿಗಳು ಸೆಲ್ಫಿ ವಿಡಿಯೋ ಮಾಡಿ ಸ್ಥಿತಿ ಗತಿ ಬಗ್ಗೆ ವಿವರಿಸಿದ್ದಾರೆ..
ಭಾರತೀಯರ ಸ್ಥಳಾಂತರ
ಉಕ್ರೇನ್ ನಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ, ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ರೊಮೇನಿಯಾ ಮತ್ತು ಹಂಗೇರಿಯ ಮಾರ್ಗವನ್ನು ಕೇಂದ್ರ ಸರ್ಕಾರ ಮತ್ತು ರಾಯಭಾರ ಕಚೇರಿ ಆಯ್ಕೆ ಮಾಡಿದೆ. ಈ ಮಾರ್ಗದಿಂದ ಭಾರತೀಯರನ್ನು ಸ್ಥಳಾಂತರಿಸುವ ಪ್ರಯತ್ನ ಆರಂಭಿಸಲಾಗಿದೆ. ಹಂಗೇರಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರಸ್ತುತ ಹಂಗೇರಿಯನ್ ಗಡಿಗೆ ಸಮೀಪದಲ್ಲಿರುವ ಉಕ್ರೇನ್ ಭಾರತೀಯರನ್ನ ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.
ಯುದ್ಧ ನಿಲ್ಲಿಸುವಂತೆ ಪುಟಿನ್ ಗೆ ಮನವಿ ಮಾಡಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಉಕ್ರೇನ್ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪುಟಿನ್, ಪ್ರಧಾನಿ ಮೋದಿಗೆ ವಿವರಿಸಿದ್ದಾರೆ. ರಷ್ಯಾ ಮತ್ತು ನ್ಯಾಟೋ ಗುಂಪಿನ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಸಂವಾದದ ಮೂಲಕ ಮಾತ್ರ ಪರಿಹರಿಸಬಹುದು ಎಂಬ ತಮ್ಮ ದೀರ್ಘಕಾಲದ ನಂಬಿಕೆಯನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಪ್ರಧಾನಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಪುಟಿನ್ ವಿರುದ್ಧವೇ ತಿರುಗಿಬಿದ್ದ ರಷ್ಯನ್ನರು…
ಉಕ್ರೇನ್ ಮೇಲೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದನ್ನು ವಿರೋಧಿಸಿ ರಷ್ಯಾ ಜನರೇ ಪುಟಿನ್ ಮತ್ತು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಗುರುವಾರ ಸಂಜೆ ಮಾಸ್ಕೋ ನಗರದ ಮಧ್ಯಭಾಗದಲ್ಲಿ 1,000ಕ್ಕೂ ಹೆಚ್ಚು ಜನರು ‘ಯುದ್ಧ ಬೇಡ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೇ I am Russian Sorry For That ಎಂದು ಬಿತ್ತಿ ಚಿತ್ರ ಹಿಡಿದುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ.
ಕನ್ನಡಿಗರ ರಕ್ಷಣೆಗಾಗಿ ವೆಬ್ ಪೋರ್ಟಲ್ ಪ್ರಾರಂಭ
ಉಕ್ರೇನ್ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ವೆಬ್ ಪೋರ್ಟಲ್ ಪ್ರಾರಂಭ ಮಾಡಿದೆ. ವಿದ್ಯಾರ್ಥಿಗಳ ರಕ್ಷಣೆಗಾಗಿ ನಾವು ಕ್ರಮವಹಿಸಿದ್ದೇವೆ. ಪೋಷಕರು ಆತಂಕ ಪಡುವುದು ಬೇಡ. ನಾವು ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ. ವಿದ್ಯಾರ್ಥಿಗಳು ವೆಬ್ ಫೋರ್ಟ್ನಲ್ಲಿ ಸರಳವಾಗಿ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಷ್ಯಾ ದಾಳಿಯಲ್ಲಿ ಸೇನಾ ಸಿಬ್ಬಂದಿ ಸೇರಿ 137 ನಾಗರಿಕರು ಬಲಿ
ರಷ್ಯಾ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಇದರಿಂದ ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.