Ukraine vs russia | ಕನ್ನಡಿಗ ನವೀನ್ ಮೃತದೇಹ ಪತ್ತೆ
ನವೀನ್ ಮೃತದೇಹದ ಫೋಟೋ ವೈರಲ್
ಖಾರ್ಕಿವ್ ನಲ್ಲಿ ಕನ್ನಡಿಗ ನವೀನ್ ಮೃತದೇಹ
ವಿಮಾನದ ಮೂಲಕ ದೆಹಲಿಗೆ ಮೃತದೇಹ ರವಾನೆ
ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮಾಹಿತಿ
ಕೀವ್ : ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಕೊನೆಯುಸಿರೆಳೆದಿರುವ ಕನ್ನಡಿಗ ವಿದ್ಯಾರ್ಥಿ ನವೀನ್ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.
ನವೀನ್ ಮೃತದೇಹದ ಫೋಟೋಗಳನ್ನು ಅವರ ಸ್ನೇಹಿತರಿಗೆ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.
ಸದ್ಯ ನವೀನ್ ಅವರ ಮೃತದೇಹ ಖಾರ್ಕಿವ್ ನಲ್ಲಿದ್ದು, ಇಂದು ಭಾರತಕ್ಕೆ ಸಾಗಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಉಕ್ರೇನ್ ರಾಯಭಾರಿ ಕಚೇರಿ ಮೂಲಕ ನವೀನ್ ಮೃತ ದೇಹವನ್ನು ಭಾರತಕ್ಕೆ ವಾಪಸ್ ತರಲು ಯತ್ನ ಮಾಡಲಾಗುತ್ತಿದೆ.
ಈಗಾಗಲೇ ಅಧಿಕಾರಿಗಳ ಹಂತದಲ್ಲಿ ಮಾತುಕತೆ ನಡೆದಿದ್ದು, ಖಾರ್ಕಿವ್ ನಿಂದ ಇಂದು ಗಡಿಗೆ ರಸ್ತೆ ಮಾರ್ಗವಾಗಿ ಮೃತ ದೇಹ ಸಾಗಿಸುವ ಸಾಧ್ಯತೆ ಇದೆ. ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ರವಾನಿಸಲು ಚಿಂತನೆ ನಡೆಸಲಾಗಿದೆ.
ಇನ್ನು ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನವೀನ್ ಮೃತದೇಹವನ್ನ ಹೋಲುವ ಫೋಟೋಗಳು ಬಂದಿವೆ. ಈ ಬಗ್ಗೆ ರಾಯಭಾರ ಕಚೇರಿ ಜೊತೆಗೆ ಚರ್ಚೆ ಮಾಡಿ ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.