Ukraine vs russia war | ಕನ್ನಡಿಗರನ್ನ ವಾಪಸ್ ಕರೆತರಲು ವಿಶೇಷಾಧಿಕಾರಿಯನ್ನ ನೇಮಿಸಿ
ಬೆಂಗಳೂರು : ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದು, ಅಲ್ಲಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಹೀಗಾಗಿ ಅವರನ್ನ ವಾಪಸ್ ಕರೆತರಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯುಕ್ರೇನ್-ರಷ್ಯಾ ನಡುವಿನ ಸಂಘರ್ಷದಿಂದಾಗಿ ಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಜನರನ್ನು ಮುಖ್ಯವಾಗಿ ವಿದ್ಯಾರ್ಥಿಗಳನ್ನು ವಾಪಸು ಕರೆತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಗತ್ಯ ಕ್ರಮ ಕೈಗೊಳ್ಳಬೇಕು. ಇವರ ಕುಟುಂಬದವರನ್ನು ಸಂಪರ್ಕಿಸಿ ಅವರಲ್ಲಿ ಭರವಸೆ ತುಂಬಬೇಕು.
ಯುಕ್ರೇನ್-ರಷ್ಯಾ ಸಂಘರ್ಷ ಅಂತಾರಾಷ್ಟ್ರೀಯ ವಿದ್ಯಮಾನವಾಗಿರುವ ಕಾರಣ ಕೇಂದ್ರ ಸರ್ಕಾರದ ನೆರವು-ಸಹಕಾರ ಅಗತ್ಯವಾದರೂ
ಅವರ ಮೇಲಷ್ಟೆ ಜವಾಬ್ದಾರಿ ವಹಿಸಿ ಬಿಟ್ಟುಬಿಡಬಾರದು.ಈ ಬಿಕ್ಕಟ್ಟು ಪರಿಹಾರವಾಗುವ ವರೆಗೆ ಇದರ ನಿರ್ವಹಣೆಗೆ @CMofKarnataka ಅವರು ವಿಶೇಷ ಅಧಿಕಾರಿಯನ್ನು ನೇಮಿಸಬೇಕು.
2/2#UkraineInvasion— Siddaramaiah (@siddaramaiah) February 25, 2022
ಯುಕ್ರೇನ್-ರಷ್ಯಾ ಸಂಘರ್ಷ ಅಂತಾರಾಷ್ಟ್ರೀಯ ವಿದ್ಯಮಾನವಾಗಿರುವ ಕಾರಣ ಕೇಂದ್ರ ಸರ್ಕಾರದ ನೆರವು-ಸಹಕಾರ ಅಗತ್ಯವಾದರೂ ಅವರ ಮೇಲಷ್ಟೆ ಜವಾಬ್ದಾರಿ ವಹಿಸಿ ಬಿಟ್ಟುಬಿಡಬಾರದು.
ಈ ಬಿಕ್ಕಟ್ಟು ಪರಿಹಾರವಾಗುವ ವರೆಗೆ ಇದರ ನಿರ್ವಹಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಅಧಿಕಾರಿಯನ್ನು ನೇಮಿಸಬೇಕು ಎಂದು ಸಲಹೆ ನೀಡಿದ್ದಾರೆ.
ukraine-vs-russia-war-siddaramaiah reaction









