ಚಿಕ್ಕಬಳ್ಳಾಪುರ : ವೈಧ್ಯಕೀಯ ಶಿಕ್ಷಣಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಉಕ್ರೇನ್ ಗೆ ಹೋಗಿದ್ದ 14 ವಿದ್ಯಾರ್ಥಿಗಳ ಪೈಕಿ ಇಬ್ಬರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿ ಮರಳಿ ಮನೆ ಸೇರಿಕೊಂಡಿದ್ದಾರೆ..
ಉಕ್ರೇನ್ ನಿಂದ ಇಬ್ಬರು ವಿದ್ಯಾರ್ಥಿಗಳು ಸುರಕ್ಷಿತವಾಗಿ ವಾಪಸ್ ಆಗಿದ್ದಾರೆ.. ಇನ್ನುಳಿದ 12 ಜನ ವಾಪಸ್ ಬರಬೇಕಿದೆ.. ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಢಳಿತ ಮಾಹಿತಿ ಬಿಡುಗಡೆ ಮಾಡಿದೆ.
ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರಿಗೆ ತಹಶೀಲ್ದಾರ್ ಗಳು ಧೈರ್ಯ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ..
ಚಿಂತಾಮಣಿ. ಗುಡಿಬಂಡೆ. ಚಿಕ್ಕಬಳ್ಳಾಪುರ ತಹಶೀಲ್ದಾರ್ ಗಳು ಪೋಷಕರ ಮನೆಗಳಿಗೆ ತೆರಳಿ ಪೋಷಕರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡ್ತಿದ್ದಾರೆ.