ಉಳ್ಳಾಲ ಅತ್ಯಾಚಾರ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ದಕ್ಷಿಣ ಕನ್ನಡ: ಮಹಿಳೆಯೊಬ್ಬಳಿಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಬಳಿಕ ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ್ದ. ಪ್ರಕರಣ ಸಂಬಂಧ ದೂರು ದಾಖಲಾಗ್ತಿದ್ದಂತೆ ಈತ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯನ್ನ ಆರೋಪಿಯನ್ನು ಉಳ್ಳಾಲ ಪೊಲೀಸರು ಕೋಟೆಕಾರ್ ನಲ್ಲಿ ಬಂಧಿಸಿದ್ದಾರೆ.
ಮತ್ತೊಬ್ಬಳ ಹಿಂದೆ ಬಿದ್ದ ಪತಿಗೆ ಒಂದು ಗತಿ ಕಾಣಿಸಿದ ಹೆಂಡತಿ : ಅಸಲಿಗೆ ಆಗಿದ್ದೇನು..!
ಎಸ್ ಡಿಪಿಐ ಕಾರ್ಯಕರ್ತನಾಗಿದ್ದ ಸಿದ್ದೀಕ್ ಉಳ್ಳಾಲ ಬಂಧಿತ ಆರೋಪಿಯಾಗಿದ್ದಾನೆ. ಸಂತ್ರಸ್ತ ಮಹಿಳೆ ಪತಿಯಿಂದ ದೂರವಾಗಿ ಉಳ್ಳಾಲದಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದರು. ಗಂಡನಿಲ್ಲದ ಒಂಟಿ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಈತ ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ, ಆಕೆಯ ಇಬ್ಬರು ಅಪ್ರಾಪ್ತ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಿದ್ದ ಎಂದು ಮಹಿಳೆ ಆರೋಪ ಮಾಡಿದ್ದರು.
ಬೆಂಗಳೂರಿನ ಬೇಗೂರಿನ ಅಪಾರ್ಟ್ ಮೆಂಟ್ ಬಳಿ ಚಿರತೆ ಪ್ರತ್ಯಕ್ಷ
ಘಟನೆಗೆ ಸಂಬಂಧಿಸಿ ಸಿದ್ದೀಕ್ ವಿರುದ್ಧ ಜ.16ರಂದು ಸಂತ್ರಸ್ತ ಮಹಿಳೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಆರೋಪಿಯ ವಿರುದ್ಧ ಅತ್ಯಾಚಾರ, ಪೊಕ್ಸೊ ಪ್ರಕರಣ ದಾಖಲಾಗಿತ್ತು. ಇತ್ತ ಪ್ರಕರಣ ದಾಖಲಾಗ್ತಿದ್ದಂತೆ ಅತ್ತ ಆರೋಪಿ ಎಸ್ಕೇಪ್ ಆಗಿದ್ದ. ಇದೀಗ ಆತನನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೋಟೆಲ್ ಗೆ ಲಕ್ಷಾಂತರ ರೂಪಾಯಿ ವಂಚಿಸಿ, ಐನಾತಿ ದಂಪತಿ ಎಸ್ಕೇಪ್..!
ಪತಿಯಿಂದ ನಿರಂತರ ಕಿರುಕುಳ… ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ..!
ರುಚಿ ನೋಡೋ ಉದ್ಯೋಗ… ಗಂಟೆಗೆ ರೂ.1700
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel