ಕಲಬುರಗಿ ಸಂಸದರಾದ ಡಾ. ಉಮೇಶ್ ಜಾಧವ್ ಹಾಗೂ ಅವರ ಪುತ್ರ , ಚಿಂಚೋಳಿ ಕ್ಷೇತ್ರದ ಶಾಸಕರಾದ ಡಾ. ಅವಿನಾಶ್ ಜಾಧವ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರವಾಗಿ ರಾಜ್ಯದ ವೈದ್ಯಕೀಯ ಸಚಿವರಾದ ಡಾ. ಸುಧಾಕರ್ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
“ಕಲಬುರ್ಗಿ ಸಂಸದರಾದ ಡಾ.ಉಮೇಶ್ ಜಾಧವ್ ಮತ್ತು ಚಿಂಚೋಳಿ ಕ್ಷೇತ್ರದ ಶಾಸಕರಾದ ಡಾ.ಅವಿನಾಶ್ ಜಾಧವ್ ಅವರು ಶೀಘ್ರ ಗುಣಾಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.