ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗುವ ನಂಬಿಕೆ ಇದೆ : ಉಮೇಶ್ ಕತ್ತಿ
ಬೆಂಗಳೂರು : ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗುವ ನಂಬಿಕೆ ಇದೆ. ನಾನು ಸಚಿವನಾಗದಿದ್ದರೂ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ನಿನ್ನೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಇದೀಗ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆಗಳು ಶುರುವಾಗಿದೆ. ಹೊಸ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಮಧ್ಯೆ ಸಚಿವಾಕಾಂಕ್ಷಿಗಳು ಭಾರಿ ಲಾಬಿ ನಡೆಸುತ್ತಿದ್ದಾರೆ.
ಇದೀಗ ಸಚಿವ ಸಂಪುಟ ರಚನೆ ಕುರಿತು ಶಾಸಕ ಉಮೇಶ್ ಕತ್ತಿ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನು ಈ ಹಿಂದೆ 4 ಬಾರಿ ಮಂತ್ರಿಯಾಗಿದ್ದೇನೆ. ಮುಂದೆಯೂ ಸಚಿವ ಆಗುತ್ತೇನೆ ಎಂಬ ನಂಬಿಕೆ ಇದೆ. ಅಖಂಡ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನಾನೂ ಪಕ್ಷದಲ್ಲಿದ್ದೇನೆ. ಹೈಕಮಾಂಡ್ ಭೇಟಿಯಾಗುವೆ. ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗುವ ನಂಬಿಕೆ ಇದೆ. ನಾನು ಸಚಿವನಾಗದಿದ್ದರೂ ಶಾಸಕನಾಗಿ ಕೆಲಸ ಮಾಡುತ್ತೇನೆ ಎಂದು ಕತ್ತಿ ಹೇಳಿದ್ದಾರೆ.