Umesh Katthi | ಉಮೇಶ್ ಕತ್ತಿ ನಿಧನಕ್ಕೆ ಆರಗ ಜ್ಞಾನೇಂದ್ರ ಸಂತಾಪ
ತುಮಕೂರು : ಸಚಿವ ಉಮೇಶ್ ಕತ್ತಿ ನಿಧನಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.
ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಂಬನಿ ಮಿಡಿದಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ, ಉಮೇಶ್ ಕತ್ತಿ ಅವರ ನಿಧನ ಅತ್ಯಂತ ದುಃಖವಾಗಿದೆ.

ಅವರು ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಅನಾರೋಗ್ಯದ ಕಾರಣ ಕಳೆದ ಕ್ಯಾಬಿನೆಟ್ ಗೆ ಅವರು ಹಾಜರಾಗಿರಲಿಲ್ಲ ಎಂದರು.
ಅತ್ಯಂತ ಒಳ್ಳೆಯವರು ಮತ್ತು ಹಾಸ್ಯ ಪ್ರಜ್ಞೆ ಉಳ್ಳವರಾಗಿದ್ದರು. ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು.
ಅವರ ಕುಟುಂಬಕ್ಕೆ ದುಖ ಭರಿಸುವ ಶಕ್ತಿ ಕೊಡಲಿ. ಅವರ ನಿಧನದಿಂದ ನನ್ನ ಎಲ್ಲಾ ಕೆಲಸ ಕಾರ್ಯ ರದ್ದು ಮಾಡಿದ್ದೇನೆ ಎಂದಿದ್ದಾರೆ.