ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ
ಬೆಂಗಳೂರು : ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.
ಉಮೇಶ್ ರೆಡ್ಡಿ 1998ರಲ್ಲಿ ಬೆಂಗಳೂರಿನ ಪೀಣ್ಯಾದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2006ರಲ್ಲಿ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು.
ಈ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡು ಮಾಡುವಂತೆ ಕೋರಿ ಉಮೇಶ್ ರೆಡ್ಡಿ ತಮ್ಮ ವಕೀಲ ಬಿ.ಎನ್.ಜಗದೀಶ್ ಮೂಲಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಅರವಿಂದ್ ಕುಮಾರ್ ಹಾಗೂ ನ್ಯಾ.ಪ್ರದೀಪ್ ಸಿಂಗ್ ಯೆರೂರು ಅವರಿದ್ದ ಹೈಕೋರ್ಟ್ ಪೀಠ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.