Umran Mallik ಬುಮ್ರಾ ದಾಖಲೆ ಮುರಿದ ಉಮ್ರಾನ್
ಭಾರತ ಕ್ರಿಕೆಟ್ ತಂಡದ ಯುವ ವೇಗಿ ಉಮ್ರಾನ್ ಮಲ್ಲಿಕ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ವೇಗದ ಬೌಲಿಂಗ್ ಮಾಡಿದ ಭಾರತದ ವೇಗಿ ಎನ್ನುವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಮೊನ್ನೆ ಶ್ರೀಲಂಕಾ ವಿರದ್ಧದ ಮೊದಲ ಟಿ20 ಪಂದ್ಯದಲ್ಲಿ ವೇಗಿ ಉಮ್ರಾನ್ ಮಲ್ಲಿಕ್ ಗಂಟೆಗೆ 155 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿ ವೇಗಿ ಜಸ್ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಅಳಿಸಿ ಹಾಕಿದರು.
2018ರಲ್ಲಿ ಜಸ್ಪ್ರೀತ್ ಬುಮ್ರಾ ಬಾರ್ಡರ್- ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 153.2 ಕಿ.ಮೀ.ವೇಗದಲ್ಲಿ ಬೌಲಿಂಗ್ ಮಾಡಿ ದಾಖಲೆ ಬರೆದಿದ್ದರು. ಇದೀಗ ಜಮ್ಮು ಕಾಶ್ಮೀರದ 23 ವರ್ಷದ ಯುವಕ ಉಮ್ರಾನ್ ಮಲ್ಲಿಕ್ ಈ ದಾಖಲೆಯನ್ನು ಮುರಿದಿದ್ದಾರೆ.
ವಿಶೇಷವೆಂದರೆ 155 ಕಿ.ಮೀ.ವೇಗದಲ್ಲಿ ಎಸೆದ ಚೆಂಡಿನಲ್ಲಿ ಲಂಕಾ ನಾಯಕ ದಾಸುನ್ ಶನಕಾ ಔಟಾದರು.
ಉಮ್ರಾನ್ ಮಲ್ಲಿಕ್ 4 ಓವರ್ಗಳಿಂದ 27 ರನ್ ಕೊಟ್ಟು 2 ವಿಕಟ್ ಪಡೆದರು.