ಮುಂಬೈ: ವಿದ್ಯಾರ್ಥಿನಿಯೋರ್ವಳು ಶೈಕ್ಷಣಿಕ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಮುಂಬೈನ ಪಶ್ಚಿಮ ಮಲಾಡ್ ನಲ್ಲಿ ನಡೆದಿದೆ. ವಿದ್ಯಾರ್ಥಿಯೊರ್ವಳು 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿದ್ಯಾರ್ಥಿನಿಯನ್ನು ಧ್ರುವಿಲ್ ವೋರಾ(22) ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿನಿ ಮೊದಲ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದಳು. ಆದರೆ, ಶುಕ್ರವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕಚ್‌ಪಾಡಾ ಎಂಬ ಪ್ರದೇಶದಲ್ಲಿರುವ ತಮ್ಮ ವಸತಿ ಕಟ್ಟಡ ವಾಸುದೇವಂನ 7 ನೇ ಮಹಡಿಯಿಂದ ಜಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಆತ್ಮಹತ್ಯೆಗೂ ಮುನ್ನ ಮನೆಗೆ ಬಂದು ತಾಯಿ ಮತ್ತು ಸಹೋದರಿಯೊಂದಿಗೆ ಸಾಮಾನ್ಯವಾಗಿ ಮಾತನಾಡಿದ್ದ ಧ್ರುವಿಲ್, ನಂತರ ಕೆಲಸಕ್ಕಾಗಿ ಹೊರಗೆ ಹೋಗಿದ್ದ ತನ್ನ ತಂದೆಯೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾಳೆ. ಆನಂತರ ಸ್ಕೂಟರ್ ರಿಪೇರಿಗೆಂದು ಹೋಗುವ ನೆಪದಲ್ಲಿ ಕಟ್ಟಡದ ಏಳನೇ ಮಹಡಿಗೆ ಹೋಗಿ ಜಿಗಿದಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶೈಕ್ಷಣಿಕ ಒತ್ತಡದಿಂದಲೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.








