ಎಚ್ಚರ ಎಚ್ಚರ : ಬೆಂಗ್ಳೂರಲ್ಲಿ ಕಂಟ್ರೋಲ್ ತಪ್ಪಿದ ಕೊರೊನಾ..? Corona
ಬೆಂಗಳೂರು : ದೇಶದೆಲ್ಲೆಡೆ ಕೊರೊನಾ ಅಬ್ಬರ ಮತ್ತೆ ಶುರುವಾಗಿದ್ದು, ರಾಜ್ಯದಲ್ಲೂ ಪ್ರತಿ ದಿನ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್ ತಪ್ಪಿದ್ಯಾ ಅನ್ನೋ ಅನುಮಾನ ಮೂಡಿದೆ.
ಯಾಕೆಂದ್ರೆ ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇಂದು ಬರೋಬ್ಬರಿ 930 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಮಂಗಳವಾರ 700, ಬುಧವಾರ 786 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಇಂದು ಬರೋಬ್ಬರಿ 930 ಕೋವಿಡ್ ಕೇಸ್ಗಳು ಪತ್ತೆಯಾಗಿವೆ.
ಇದನ್ನ ಗಮನಿಸಿದ್ರೆ ಬೆಂಗಳೂರಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ ಸ್ಫೋಟ ಆಗಲಿದೆ ಎಂಬುದರಲ್ಲಿ ಡೌಟೇ ಇಲ್ಲ. ಇನ್ನು ಕ್ಷಣ ಕ್ಷಣಕ್ಕೂ ಕೊರೊನಾ ಕಂಟ್ರೋಲ್ ತಪ್ಪುತ್ತಿದ್ದು, ಸಂಪರ್ಕ ಪತ್ತೆ ಹಚ್ಚುವಿಕೆ, ಟೆಸ್ಟಿಂಗ್ ಹೆಚ್ಚು ಮಾಡಲು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲು ಪಾಲಿಕೆ ನಿರ್ಧರಿಸಿದೆ.