ದೆಹಲಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – ಹಲವರು ಸಿಲುಕಿರುವ ಶಂಕೆ…
ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕರುವ ಘಟನೆ ದೆಹಲಿಯ ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ನಡೆದಿದೆ.
ಐವರನ್ನು ಎನ್ಡಿಆರ್ಎಫ್ ರಕ್ಷಣಾ ತಂಡ ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದೆ. ಇನ್ನೂ ಒಂದಿಬ್ಬರು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎನ್ಡಿಆರ್ಎಫ್ ಜೊತೆಗೆ ಅಗ್ನಿಶಾಮಕ ದಳದ ತಂಡವೂ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಕಟ್ಟಡ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಿರುವುದು ಬೆಳಕಿಗೆ ಬಂದಿದೆ. ಒಂದು ತಿಂಗಳೊಳಗೆ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಕಟ್ಟಡ ನಿರ್ಮಾಣ ತುಂಬಾ ದುರ್ಬಲವಾಗಿತ್ತು ಇದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಭಾರೀ ಸದ್ದು ಕೇಳಿ ಬಂದಿದ್ದು, ಮನೆಯಿಂದ ಹೊರಗೆ ಬಂದಾಗ ಕಟ್ಟಡ ಕುಸಿದು ಬಿದ್ದಿದೆ ಎಂದು ಜನರು ತಿಳಿಸಿದ್ದಾರೆ.
ಮಾಹಿತಿ ಬಂದ ತಕ್ಷಣ ಜನರ ರಕ್ಷಣೆಗಾಗಿ ನಾಲ್ಕು ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಗ್ನಿಶಾಮಕ ದಳದ ರವೀಂದರ್ ಸಿಂಗ್ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಿರಿದಾದ ಓಣಿಗಳಿಂದಾಗಿ ಜೆಸಿಬಿ ಅಲ್ಲಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಅಪಘಾತದಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಉತ್ತರ ಜಿಲ್ಲಾ ಡಿಸಿಪಿ ಸಾಗರ್ ಸಿಂಗ್ ಕಲ್ಸಿ ತಿಳಿಸಿದ್ದಾರೆ. ಓವರ್ಲೋಡ್ನಿಂದ ಕಟ್ಟಡ ಕುಸಿದಿದ್ದು, ಪ್ರಕರಣದ ಪರಿಶೀಲನೆ ನಡೆಯುತ್ತಿದೆ.