ತುಮಕೂರು: ವ್ಯಕ್ತಿಯ ಅಪರಿಚತ ಶವವೊಂದು ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ತಾಲೂಕಿನ ಊರುಕೆರೆ ಹತ್ತಿರ ಈ ಘಟನೆ ನಡೆದಿದ್ದು, ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆಯೇ ಈ ವ್ಯಕ್ತಿಯನ್ನು ಬೇರೆ ಎಲ್ಲೋ ಕೊಲೆ ಮಾಡಿ ಇಲ್ಲಿ ಶವ ತಂದು ಎಸೆದು ಹೋಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಕುರಿತು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.