ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸತ್ರ ಕಡ್ಡಾಯ
ಬೆಂಗಳೂರು : ಏಪ್ರಿಲ್ 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಸರಕಾರಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ಮುಂದುವರೆದು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಆಯಾ ಆಡಳಿತ ಮಂಡಳಿ ನಿರ್ಧರಿಸುವ ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಿದೆ.
ಮಾರ್ಚ್ 15ರಂದು ಉನ್ನತ ನ್ಯಾಯಾಲಯವು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿಗಳನ್ನು ವಿಚಾರಣೆ ನಡೆಸಿ, ನೀಡಿದ ತೀರ್ಪು ಸರ್ಕಾರದ ಆದೇಶವನ್ನು ಸಿಂಧುಗೊಳಿಸಿದೆ.
ಹೀಗಾಗಿ, ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರದೊಂದಿಗೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.