ಹಿಜಾಬ್ ವಿವಾದ ಹಿನ್ನಲೆ – ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ ಮಾಡಿದ ಪಿಯು ಬೋರ್ಡ್…
ಕಳೆದ ವರ್ಷ ನಡೆದ ಹಿಜಬ್ ವಿವಾದ ಹಿನ್ನಲೆಯಲ್ಲಿ ಪಿಯುಸಿ ಬೋರ್ಡ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿರುವ ಆದೇಶದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಆಯಾ ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿರುವಂತಹ ಸಮವಸ್ತ್ರಗಳನ್ನ ಧರಿಸತಕ್ಕದ್ದು, ಆಡಳಿತ ಮಂಡಳಿಗಳು ಸಮವಸ್ತ್ರವನ್ನ ನಿಗದಿಪಡಿಸದೇ ಇದ್ದಲ್ಲಿ ಸಮಾನತೆ ಮತ್ತು ಐಕ್ಯತೆಯನ್ನ ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಉಡುಪು ಧರಿಸಬೇಕು ಎಂದು ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ.
ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಈ ವರ್ಷ ಮಾರ್ಗಸೂಚಿಯಲ್ಲಿ ಸಮವಸ್ತ್ರದ ಬಗ್ಗೆ ಶಿಕ್ಷಣ ಇಲಾಖೆ ಉಲ್ಲೇಖ ಮಾಡಿದೆ.