ಕೇಂದ್ರ ಆಯುಷ್ ಆರೋಗ್ಯ ಸಚಿವ ಶ್ರೀಪಾದ್ ನಾಯಕ್ ಆರೋಗ್ಯದಲ್ಲಿ ಏರುಪೇರು
ಪಣಜಿ, ಅಗಸ್ಟ್25: ಕೇಂದ್ರ ಆಯುಷ್ ಆರೋಗ್ಯ ಸಚಿವ ಶ್ರೀಪಾದ್ ನಾಯಕ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 12 ರಂದು ಕೊರೊನಾವೈರಸ್ ಸೋಂಕು ದೃಢಪಟ್ಟ ನಂತರ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರು ಕಳೆದ 10 ದಿನಗಳಿಂದ ಗೋವಾದ ಪಣಜಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಬೆಳಿಗ್ಗೆ ಅವರ ಆಮ್ಲಜನಕದ ಶುದ್ಧತ್ವ ಮಟ್ಟ ಕುಸಿದ ಹಿನ್ನೆಲೆಯಲ್ಲಿ ಸಚಿವರ ವೈದ್ಯಕೀಯ ಪರಿಸ್ಥಿತಿ ಹದಗೆಟ್ಟಿದೆ ಎಂದು ವರದಿಯಾಗಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಶ್ರೀಪಾದ್ ನಾಯಕ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ವೈದ್ಯರ ತಂಡವು ಹೆಚ್ಚಿನ ಚಿಕಿತ್ಸೆಗಾಗಿ ನಾಯಕ್ ಅವರನ್ನು ದೆಹಲಿಗೆ ಸ್ಥಳಾಂತರಿಸುವುದು ಉತ್ತಮವೇ ಎಂದು ಪರೀಕ್ಷಿಸಲು ಆಗಮಿಸಲಿದೆ ಎಂದು ಹೇಳಿದರು.
ಕಳೆದ 10 ದಿನಗಳಿಂದ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಬೆಳಿಗ್ಗೆ ಅವರ ಆಮ್ಲಜನಕದ ಶುದ್ಧತ್ವ ಕಡಿಮೆಯಾಗಿದೆ. ದೆಹಲಿಯ ಏಮ್ಸ್ ವೈದ್ಯರ ತಂಡ ಇಲ್ಲಿಗೆ ಬಂದು ಹೆಚ್ಚಿನ ಚಿಕಿತ್ಸೆಗಾಗಿ ನಾಯಕ್ ಅವರನ್ನು ದೆಹಲಿಗೆ ಸ್ಥಳಾಂತರಿಸಬೇಕೆ ಎಂದು ನಿರ್ಧರಿಸುತ್ತಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.