ಕೇಂದ್ರ ಬಜೆಟ್ 2021 | ಆರ್ಥಿಕ ಚೇತರಿಕೆಗೆ ಭಾರತ ಸಂಪೂರ್ಣ ಸಿದ್ಧ
ನವದೆಹಲಿ : ಭಾರತ ಆರ್ಥಿಕ ಚೇತರಿಕೆಗೆ ಸಂಪೂರ್ಣ ಸಿದ್ಧವಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈ ದಶಕದ ಮೊದಲ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿರುವ ಅವರು, ತಮ್ಮ ಭಾಷಣದಲ್ಲಿ, ಕೋವಿಡ್ ನಿಂದಾಗಿ ಜಗತ್ತು ಆರ್ಥಿಕವಾಗಿ ಕುಸಿಯುತ್ತಿದೆ. ಎಂದೂ ಇಲ್ಲದ ಕಷ್ಟದ ಪರಿಸ್ಥಿತಿಯಲ್ಲಿ ಬಜೆಟ್ ಮಂಡಿಸುತ್ತಿದ್ದೇವೆ. ಈಗಾಗಲೇ ದೇಶದಲ್ಲಿ ಆತ್ಮ ನಿರ್ಭರ ಯೋಜನೆ ಘೋಷಿಸಲಾಗಿದೆ. 2021ನೇ ವರ್ಷ ದೇಶದಲ್ಲಿ ಅತಿ ದೊಡ್ಡ ಮೈಲಿಗಲ್ಲಿನ ವರ್ಷವಾಗಿದೆ ಎಂದ ಅವರು, ಇದೇ ವೇಳೆ ಕೊರೊನಾ ವಿರುದ್ಧ ಹೋರಾಡಿದ ವಾರಿಯರ್ಸ್ ಗೆ ಧನ್ಯವಾದ ಅರ್ಪಿಸಿದರು.
ಇನ್ನು ಭಾರತ ಆರ್ಥಿಕ ಚೇತರಿಕೆಗೆ ಸಂಪೂರ್ಣ ಸಿದ್ಧವಾಗಿದೆ ಎಂದು ಭರವಸೆ ನೀಡಿದ ಅವರು, ಇಂದು ಭಾರತ 2 ಕೊರೊನಾ ಲಸಿಕೆಗಳನ್ನು ಹೊಂದಿದೆ. ಕೇವಲ ದೇಶ ಮಾತ್ರವಲ್ಲದೇ ನೂರಕ್ಕೂ ಹೆಚ್ಚು ದೇಶಗಳನ್ನು ರಕ್ಷಿಸಲು ಮುಂದಾಗಿದೆ. ಇನ್ನೂ ಕೆಲವು ಲಸಿಕೆಗಳನ್ನು ಶೀಘ್ರದಲ್ಲೇ ನಿರೀಕ್ಷಿಸಬಹುದು ಎಂದು ತಿಳಿಸಿದರು.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಇದೇ ವೇಳೆ ಲಾಕ್ ಡೌನ್ ಸಂದರ್ಭದಲ್ಲಿ ಘೋಷಿಸಲಾದ ಪ್ಯಾಕೇಜ್‍ಗಳನ್ನು ಉಲ್ಲೇಖಿಸಿದ ಅವರು, ಆರ್ಥಿಕ ಚೇತರಿಕೆಗೆ ದೇಶ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಜಾರಿ ಮಾಡಿದೆ. ಮೂರು ಆತ್ಮ ನಿರ್ಭರ ಯೋಜನೆಗಳನ್ನು ಕೇಂದ್ರ ಘೋಷಿಸಿದ್ದು, ಅವು ಮಿನಿ ಬಜೆಟ್‍ಗಳ ರೀತಿ ಇದ್ದವು ಎಂದು ಅಭಿಪ್ರಾಯಪಟ್ಟಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








