ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಆಯವ್ಯಯ ಅರ್ಥವ್ಯವಸ್ಥೆಯ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಶಕ್ತಿ ತುಂಬುವ ಸಾಮಥ್ರ್ಯ ಪ್ರದರ್ಶಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಸವಳಿದಿರುವ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಬಜೆಟ್ ಸಂಜೀವಿನಿಯಂತಿದೆ. ಕೊರೋನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್ ಉತ್ತಮವಾಗಿದೆ ಎಂದಿದ್ದಾರೆ ಎಂದು ಟ್ವಿಟರ್ನಲ್ಲಿ ಸಿಎಂ ಪ್ರತಿಕ್ರಿಯಿಸಿದ್ದಾರೆ.
ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ ಹಾಗೂ ಮೂಲಸೌಕರ್ಯಾಭಿವೃದ್ಧಿ, ಕೈಗಾರಿಕಾ ಬೆಳವಣಿಗೆಗೆ ಬಜೆಟ್ ನಲ್ಲಿ ವಿಶೇಷ ಗಮನ ನೀಡಲಾಗಿರುವುದು ಸ್ವಾಗತಾರ್ಹ. ದೇಶದ ಬೆಳವಣಿಗೆಗೆ ನೆರವಾಗುವ ಬಜೆಟ್ ಇದಾಗಿದ್ದು, ಅರ್ಥವ್ಯವಸ್ಥೆ ಪುನರ್ವರ್ಧನೆಗೆ ಸಹಕಾರಿಯಾಗಲಿದೆ ಎಂದಿದ್ದಾರೆ.
ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ಬಜೆಟ್ ನಲ್ಲಿ 13 ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿರುವುದು, ಸ್ವಚ್ಛ ಅಭಿಯಾನಕ್ಕೆ 1.41 ಲಕ್ಷ ಕೋಟಿ ರೂ. ಅನುದಾನ ಒದಗಿಸಿರುವುದನ್ನು ಸ್ವಾಗತಿಸುತ್ತೇನೆ.
ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ ಹಾಗೂ ಮೂಲಸೌಕರ್ಯಾಭಿವೃದ್ಧಿ, ಕೈಗಾರಿಕಾ ಬೆಳವಣಿಗೆಗೆ ಬಜೆಟ್ ನಲ್ಲಿ ವಿಶೇಷ ಗಮನ ನೀಡಲಾಗಿದೆ. ಪ್ರಧಾನಿ ನರೇಂದ್ರ ಅವರ ಕನಸಿನಂತೆ 2022ರೊಳಗೆ ರೈತರ ಆದಾಯ ದ್ವಿಗುಣಗೊಳಿಸಲು ಭೂಮಿಕೆ ಒದಗಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel