ನವದೆಹಲಿ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಏರ್ ಇಂಡಿಯಾ ಸೇರಿದಂತೆ ನಷ್ಟದಲ್ಲಿರುವ ಸಂಸ್ಥೆಗಳು, ಕೈಗಾರಿಕೆಗಳಿಗೆ ಶಾಶ್ವತ ಬೀಗ ಹಾಕಲು ನಿರ್ಮಲಾ ಸೀತಾರಾಮನ್ ಮಂಡಿಸಿದ 2021ನೇ ಸಾಲಿನ ಆಯವ್ಯಯದಲ್ಲಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್, ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದ 1.75 ಲಕ್ಷ ಕೋಟಿ ಬಂಡವಾಳ ಹಿಂತೆಗೆಯುವ ಗುರಿ ಹೊಂದಲಾಗಿದೆ ಎಂದು ಪ್ರಕಟಿಸಿದ್ದಾರೆ.
ಅದರಂತೆ ಏರ್ ಇಂಡಿಯಾ, ಐಡಿಬಿಐ ಬ್ಯಾಂಕ್, ಬಿಇಎಂಎಲ್, ಶಿಪ್ಪಿಂಗ್ ಕಾರ್ಪೋರೇಶನ್ ನಲ್ಲಿ ಹೂಡಿಕೆ ಹಿಂತೆಗೆತ ಯಶಸ್ವಿಯಾಗಿದ್ದು, ಕಾಲಮಿತಿಯಲ್ಲಿ ನಷ್ಟದಲ್ಲಿರುವ ಕೈಗಾರಿಕೆ ಕಂಪನಿಗಳನ್ನು ಮುಚ್ಚಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಜತೆಗೆ ವಿಮಾನ ನಿಲ್ದಾಣಗಳ ಖಾಸಗೀಕರಣ ಮೂಲಕ ಬಂಡವಾಳ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಬ್ಯಾಂಕ್‍ಗಳಿಗೆ 20ಸಾವಿರ ಕೋಟಿ
ಕೋವಿಡ್‍ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಬಜೆಟ್‍ನಲ್ಲಿ 20 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
ಬ್ಯಾಂಕುಗಳಲ್ಲಿ ಜನರು ಇಟ್ಟಿರುವ ಹಣಕ್ಕೆ ನೀಡುವ ಭದ್ರತಾ ವಿಮೆಯ ಮೊತ್ತವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಸಾಮಾನ್ಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗಿದ್ದು, ಸರ್ಕಾರಿ ಹಣಕಾಸು ಸಂಸ್ಥೆಗಳ ಸಬಲೀಕರಣಕ್ಕೆ ಸರ್ಕಾರದ ಆದ್ಯತೆ ನೀಡಲಾಗಿದೆ. ಜತೆಗೆ ಹೊಸ ಹಣಕಾಸು ಸಂಸ್ಥೆಗಳ ಆರಂಭಕ್ಕೂ ಯೋಜನೆ ರೂಪಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಎಲ್‍ಐಸಿಯ ಷೇರುಗಳು ಷೇರುಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಎಲ್‍ಐಸಿಯ ಈಪಿಒ ಬಿಡುಗಡೆ ಸಂಬಂಧ ಸಂಸತ್ತಿನಲ್ಲಿ ಶೀಘ್ರ ವಿಧೇಯಕ ಮಂಡಿಸಲಾಗುವುದು. ವಿಮಾ ಕಂಪನಿಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಮಿತಿಯನ್ನು ಶೇ.74ರಷ್ಟು ಹೆಚ್ಚಿಸಲು ಬಜೆಟ್‍ನಲ್ಲಿ ಉಲ್ಲೇಖಿಸಲಾಗಿದೆ.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಕೃಷಿ, ಕೃಷಿ ಸಂಬಂಧಿತ ಕಾರ್ಮಿಕರ ಆರ್ಥಿಕತೆಗೆ ಒತ್ತು ನೀಡಲಾಗಿದೆ. ಕೃಷಿಕರ ಆದಾಯ ದ್ವಿಗುಣಗೊಳಿಸಲು ಕೇಂದ್ರದ ನಿರ್ಧಾರ ಮಾಡಿದೆ ಎಂದು ಬಜೆಟ್‍ನಲ್ಲಿ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel