ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರದ ಸಚಿವ ಸಂಪುಟ ಒಪ್ಪಿಗೆ
2024 ರ ವೇಳೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆ, ಸಮಗ್ರ ಶಿಶು ಅಭಿವೃದ್ಧಿ ಸೇವೆಗಳು, ಪ್ರಧಾನ ಮಂತ್ರಿ ಪೋಷಣೆ ಶಕ್ತಿ ನಿರ್ಮಾಣ-ಪಿಎಂ ಪೋಶನ್ ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಸಾರವರ್ಧಿತ ಅಕ್ಕಿಯನ್ನು ಪೂರೈಸಲು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು ಶುಕ್ರವಾರ ತನ್ನ ಅನುಮೋದನೆಯನ್ನು ನೀಡಿದೆ. ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು.
ಸಂಪುಟ ಸಭೆಯ ನಂತರ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು, ಭಾರತೀಯ ಆಹಾರ ನಿಗಮ ಮತ್ತು ರಾಜ್ಯ ಏಜೆನ್ಸಿಗಳು ಈಗಾಗಲೇ ಬಲವರ್ಧಿತ ಅಕ್ಕಿ ಖರೀದಿಯಲ್ಲಿ ತೊಡಗಿವೆ ಮತ್ತು ಇದುವರೆಗೆ ಸುಮಾರು 88 LMT ಗೂ ಅಧಿಕ ಅಕ್ಕಿಯನ್ನು ಖರೀದಿಸಲಾಗಿದೆ ಎಂದು ಹೇಳಿದರು.
ಭತ್ತದ ಸತ್ವಯುತೀಕರಣದ ಸಂಪೂರ್ಣ ವೆಚ್ಚವನ್ನು ವಾರ್ಷಿಕ ಸುಮಾರು 2,700 ಕೋಟಿ ರೂಪಾಯಿಗಳನ್ನು ಕೇಂದ್ರವು ಭರಿಸಲಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.







