ಮೋದಿ ಸಂಪುಟ ಪುನಾರಚನೆ : ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿಗೆ ಮಂತ್ರಿಪಟ್ಟ

1 min read
shobha-karandlaje

ಮೋದಿ ಸಂಪುಟ ಪುನಾರಚನೆ : ಶೋಭಾ ಕರಂದ್ಲಾಜೆ shobha-karandlaje , ಎ ನಾರಾಯಣಸ್ವಾಮಿಗೆ ಮಂತ್ರಿಪಟ್ಟ

ನವದೆಹಲಿ : ಕರ್ನಾಟಕದ ಸಂಸದರಾದ ಎ ನಾರಾಯಣಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರ ಸಚಿವ ಸಂಪುಟ ಸೇರುವ ಅದೃಷ್ಠ ಒಲಿದು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಸಂಜೆ 6 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದ್ದು, ರಾಜ್ಯದ ಇಬ್ಬರು ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.

shobha-karandlaje

ಮೂಲಗಳ ಪ್ರಕಾರ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಗುವುದು ನಿಚ್ಚಳವಾಗಿದೆ. ಹಾಗೇ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅವರಿಗೂ ಸಂಪುಟದಲ್ಲಿ ಸ್ಥಾನ ಸಾಧ್ಯತೆ ಇದೆ.

ಶೋಭಾ ಕರಂದ್ಲಾಜೆ ಕೇಂದ್ರ ಸಂಪುಟ ಸೇರ್ಪಡೆಯಾದ್ರೆ ರಾಜ್ಯದ ಐದನೇ ಸಂಸದೆಯಾಗಲಿದ್ದಾರೆ. ಈ ಹಿಂದೆ ಸರೋಜಿನಿ ಮಹಿಷಿ, ಬಳ್ಳಾರಿ ಸಂಸದೆಯಾಗಿದ್ದ ಬಸವರಾಜೇಶ್ಚರಿ, ಚಿಕ್ಕಮಗಳೂರು ಸಂಸದೆಯಾಗಿದ್ದ ಡಿ.ಕೆ.ತಾರದೇವಿ, ಕೆನರಾ ಸಂಸದೆಯಾಗಿದ್ದ ಮಾರ್ಗರೇಟ್ ಅಳ್ವಾ ಕೇಂದ್ರ ಸಚಿವರಾಗಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd