SC, ST, OBC ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ರದ್ದು ಗೊಳಿಸಿದ ಕೇಂದ್ರ ಸರ್ಕಾರ…
2022-23ರ ಶೈಕ್ಷಣಿಕ ವರ್ಷದಿಂದ ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ), ಇತರೆ ಹಿಂದುಳಿದ ಸಮುದಾಯ (ಒಬಿಸಿ) ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನ ಕೇಂದ್ರ ಸರ್ಕಾರ ರದ್ದು ಮಾಡಿದೆ.
ಈ ವಿದ್ಯಾರ್ಥಿಗಳು ಶಿಕ್ಷಣ ಹಕ್ಕು (ಆರ್ಟಿಇ) ಕಾಯಿದೆ, 2009 ರ ಅಡಿಯಲ್ಲಿ ಒಳಗೊಳ್ಳುತ್ತಾರೆ. ಇದು ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು (1 ರಿಂದ 8 ನೇ ತರಗತಿಗಳು) ನೀಡುತ್ತದೆ ಎಂದು ಎಂದು ಸರ್ಕಾರ ವಿವರಿಸಿದೆ.
“9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಮಾತ್ರ ಈಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ ಒಳಪಡುತ್ತಾರೆ” ಎಂದು ಸರ್ಕಾರ ಹೇಳಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕ ಹೊರೆಯನ್ನು 75:25 ಅನುಪಾತದಲ್ಲಿ ಹಂಚಿಕೊಳ್ಳುತ್ತವೆ. ಪೋಷಕರ ಆದಾಯ ವಾರ್ಷಿಕ ₹ 2.50 ಲಕ್ಷವನ್ನ ಮೀರದಿದ್ದರೆ ವಿದ್ಯಾರ್ಥಿ ಇದಕ್ಕೆ ಅರ್ಹನಾಗಿರುತ್ತಾನೆ.
ಈ ಹಿಂದೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಯಲ್ಲಿ ಎಸ್ಸಿ ಮತ್ತು ಒಬಿಸಿ ಸಮುದಾಯಗಳ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ, ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಎಸ್ಟಿ ವಿದ್ಯಾರ್ಥಿಗಳಿಗೆ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ವಿದ್ಯಾರ್ಥಿ ವೇತನವನ್ನ ಒದಗಿಸಲಾಗುತ್ತಿತ್ತು.
ಈ ವರ್ಷವೂ ಕೋಟ್ಯಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳ ಅರ್ಜಿಗಳನ್ನು ಸಚಿವಾಲಯ ತಿರಸ್ಕರಿಸಿದೆ.
ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಹಲವು ರಾಜಕೀಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
Union Government stops pre-matric scholarship for SC, ST, OBC and minority students of Class 1 to 8, and explains why