ಮಂಡ್ಯ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಅಮಿತ್ ಶಾ….
ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು ಹಾಕಿದ್ದು, ಮುಂದಿನ ವಿಧಾನಸಭೆಗೆ ಈಗಿನಿಂದಲೇ ಬಿಜೆಪಿ ಈಗಿನಿಂದಲೇ ತಯಾರಿಯನ್ನ ನಡೆಸುತ್ತಿದೆ. ಅದರ ಭಾಗವಾಗಿ ಅಮಿತ್ ಶಾ ಇಂದು ಮಂಡ್ಯಗೆ ಆಗಮಿಸಿದ್ದಾರೆ. ಬೆಂಗಳೂರಿಗೆ ಬಂದಿಳಿದ ಅಮಿತ್ ಶಾ ಅವರನ್ನ ಬಸವರಾಜ್ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ಮೆಗಾ ಡೈರಿ ಘಟಕವನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವಾರಾದ ಅಮಿತ್ ಶಾ ಅವರು ಉದ್ಘಾಟನೆ ಮಾಡಿ ಸಮಾವೇಶದಲ್ಲಿ ಮಾತನಾಡಿದ್ದಾರೆ.
ಮದ್ದೂರಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮೆಗಾ ಡೈರಿ, 47 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿದ್ದು, ಸುಮಾರು 260.9 ಕೋಟಿ ವೆಚ್ಚದ ಹಾಲು ಉತ್ಪಾದಕ ಘಟಕವಾಗಿದೆ. ಒಂದು ದಿನಕ್ಕೆ 30 ಮೆಟ್ರಿಕ್ ಟನ್ ಹಾಲಿನ ಪೌಡರ್, 4 ಮೆಟ್ರಿಕ್ ಟನ್ ಕೋವಾ, 2 ಮೆಟ್ರಿಕ್ ಟನ್ ಪನ್ನೀರ್, 12 ಮೆಟ್ರಿಕ್ ಟನ್ ತುಪ್ಪ, 10 ಮೆಟ್ರಿಕ್ ಟನ್ ಬೆಣ್ಣೆ, 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೆಗಾ ಡೈರಿಯಿಂದ ಒಂದು ವರ್ಷಕ್ಕೆ 6 ಕೋಟಿ ಹಣ ಉಳಿತಾಯವಾಗಲಿದೆ.
Union Home Minister Amit Shah inaugurates Mega Dairy at Gejjalagere, Mandya