ನವದೆಹಲಿ: ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡಿರುವುದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇದು ವಿಶೇಷ ಉಪಚಾರ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಇದು ವಾಡಿಕೆಯ ತೀರ್ಪು ಅಲ್ಲ ಎಂದು ನಾನು ನಂಬುತ್ತೇನೆ. ಈ ದೇಶದ ಬಹಳಷ್ಟು ಜನರು ಅವರಿಗೆ ವಿಶೇಷ ಉಪಚಾರ ನೀಡಲಾಗಿದೆ ಎಂದು ಹೇಳುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ- ಇಂಡಿಯಾ ಒಕ್ಕೂಟ ಬಹುಮತ ಗಳಿಸಿದರೆ ನಾನು ಜೈಲಿಗೆ ಮರಳುವ ಅಗತ್ಯವಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಬೇಡಿ ಎಂಬ ಹೇಳಿಕೆಗೂ ಅಮಿತ್ ಶಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದು ಸುಪ್ರೀಂ ಕೋರ್ಟ್‌ನ ಸ್ಪಷ್ಟವಾದ ತಿರಸ್ಕಾರವಾಗಿದೆ. ಯಾರಾದರೂ ವಿಜಯಶಾಲಿಯಾಗಿ ಹೊರಹೊಮ್ಮಿದರೆ ಸುಪ್ರೀಂ ಕೋರ್ಟ್ ಅವರನ್ನು ಜೈಲಿಗೆ ಕಳುಹಿಸುವುದಿಲ್ಲ ಎಂದು ಅವರು ಹೇಳಲು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ಜಾಮೀನು ನೀಡಿದ ನ್ಯಾಯಾಧೀಶರು ತಮ್ಮ ತೀರ್ಪನ್ನು ಕೇಜ್ರಿವಾಲ್ ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಕುರಿತು ಯೋಚಿಸಬೇಕು ಎಂದು ಶಾ ಬೇಸರ ವ್ಯಕ್ತಪಡಿಸಿದ್ದಾರೆ.