ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
ಹೊಸದಿಲ್ಲಿ, ಅಗಸ್ಟ್ 4: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮಂಗಳವಾರ ಕೊರೋನಾ ಸೋಂಕು ದೃಢಪಟ್ಟಿದ್ದು ಮೆಡಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ . ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.
ವರದಿಗಳ ಪ್ರಕಾರ, ಪ್ರಧಾನ್ ಅವರ ಸಿಬ್ಬಂದಿ ಅಧಿಕಾರಿಗೆ ಕೊರೋನಾ ಸೋಂಕು ದೃಢಪಟ್ಟ ಬಳಿಕ ಅವರು ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದರು.
51 ವರ್ಷದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಕೋವಿಡ್ -19 ಗೆ ದೃಢಪಟ್ಟ ಭಾರತದ ಎರಡನೇ ಕೇಂದ್ರ ಸಚಿವರಾಗಿದ್ದಾರೆ. ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾನ್, ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕರ್ನಾಟಕದ ಮಾಜಿ ಸಿಎಂ ಸಿದ್ಧರಾಮಯ್ಯ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೂ ಸಹ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.