ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಪಾಸಿಟಿವ್
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಘು ರೋಗ ಲಕ್ಷಣಗಳು ಕಂಡು ಬಂದಿದ್ದು, ಪರೀಕ್ಷಿಸಿದಾಗ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿಸಿದ್ದಾರೆ.
ಸದ್ಯ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೋಮ್ ಕ್ವಾರಂಟೈನ್‍ಗೆ ಒಳಗಾಗಿದ್ದು, ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಮತ್ತು ಹೋಮ್ ಕ್ವಾರಂಟೈನ್ ಆಗಿ ಎಂದು ಟ್ವಿಟ್ ಮಾಡಿದ್ದಾರೆ.








