ಉತ್ತರ ಕರ್ನಾಟಕದವರು ಸಿಎಂ ಆಗಬೇಕು : ಪ್ರಹ್ಲಾದ್ ಜೋಶಿ
ಧಾರವಾಡ : ಖಂಡಿತವಾಗಿಯೂ ಉತ್ತರ ಕರ್ನಾಟಕದವರು ಸಿಎಂ ಆಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಉತ್ತರ ಕರ್ನಾಟಕದ ಸಿಎಂ ಬಗ್ಗೆ ಸಚಿವ ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಜೋಶಿ, ಉತ್ತರ ಕರ್ನಾಟಕದವರು ಸಿಎಂ ಆಗಬೇಕು ಎಂಬುದು ನಿಜ.
ಉಮೇಶ ಕತ್ತಿ ಮುಂದಿನ ಸಿಎಂ ಎಂದು ಹೇಳಿದ್ದಾರೆ. ನಾಳೆಯೇ ಆಗುತ್ತಾರೆ ಎಂದು ಅವರು ಹೇಳಿಲ್ಲವಲ್ಲ ಎಂದರು.
ಅಲ್ಲದೆ ಉಮೇಶ ಕತ್ತಿ ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನದ ಅವಕಾಶ ಬರಬೇಕಿದೆ, ಆದರೆ ನಾಳೆ, ನಾಡಿದ್ದು, ಈ ವರ್ಷದಲ್ಲಿ ಅಂತಲ್ಲ.
ಆದರೆ ಮುಂದೆ ಉತ್ತರ ಕರ್ನಾಟಕಕ್ಕೆ ಅವಕಾಶ ಬರೇಕಿದೆ, ಖಂಡಿತವಾಗಿಯೂ ಉತ್ತರ ಕರ್ನಾಟಕದವರು ಸಿಎಂ ಆಗಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ಕಾಂಗ್ರೆಸ್ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಮುಖಗಳು. ಕಾಂಗ್ರೆಸ್ ನವರು ಭ್ರಷ್ಟಾಚಾರದ ರಕ್ತ ಬೀಜಾಸುರರು.
ನಾವು ಏಳು ವರ್ಷಗಳಿಂದ ದೇಶದಲ್ಲಿ ಸರ್ಕಾರ ನಡೆಸುತ್ತಿದ್ದೇವೆ. ಈವರೆಗೂ ಒಬ್ಬ ಮಂತ್ರಿ ಮೇಲೆ ಒಂದೂ ಆರೋಪ ಕೇಳಿಬಂದಿಲ್ಲ ಎಂದು ಟಾಂಗ್ ನೀಡಿದರು.