ಭೀಕರ ರಸ್ತೆ ಅಪಘಾತ – ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಮತ್ತು ಸಚಿವರ ಆಪ್ತ ಸಹಾಯಕ ಸ್ಥಳದಲ್ಲಿಯೇ ಸಾವು
ಕಾರವಾರ, ಜನವರಿ12: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯಕ್ ಪತ್ನಿ ಹಾಗೂ ಸಚಿವರ ಆಪ್ತ ಸಹಾಯಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಯಲ್ಲಾಪುರದಿಂದ -ಗೋಕರ್ಣಕ್ಕೆ ಹೋಗುವ ಸಂದರ್ಭದಲ್ಲಿ ಉತ್ತರ ಕನ್ನಡ ಚಿಲ್ಲೆಯ ಹೊಸಕಂಬಿ ಗ್ರಾಮದಲ್ಲಿ ಕಾರು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿದ್ದ ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯ ನಾಯಕ್ ಮತ್ತು ಆಪ್ತಕಾರ್ಯದರ್ಶಿ ದೀಪಕ್ ಗುಮೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ಹೊಸಕಂಬಿ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಅಪಘಾತದ ತೀವ್ರತೆಯಿಂದ ಸಚಿವರಾದ ಶ್ರೀಪಾದ್ ನಾಯಕ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಅಂಕೋಲಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸಚಿವ ಶ್ರೀಪಾದ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಗೋವಾದ ಬಾಂಬೋಲಿ ಆಸ್ಪತ್ರೆಗೆ ರವಾನಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1348302580028383234?s=19
https://twitter.com/SaakshaTv/status/1346868591300210688?s=19








