ಹಾಸನ : ಆರ್ ಟಿ ಓ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಆರ್ ಟಿ ಓ ಅಧಿಕಾರಿ ಮತ್ತು ಅದೇ ಇಲಾಖೆಯ ನಿವೃತ್ತ ನೌಕರರ ವರ್ಕಾವಣೆ ದಂಧೆ ನಡೆಯುತ್ತಿದೆ. 100 ಆರ್ ಟಿ ಓ ಅಧಿಕಾರಿಗಳ ವರ್ಗಾವಣೆಗೆ 75 ಕೋಟಿ ರೂ ನೀಡುವಂತೆ ಅಧಿಕಾರಿಯೊಬ್ಬರು ಒತ್ತಡ ಹೇರಲಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಸಾರಿಗೆ ಇಲಾಖೆ ಮೂಲಕ ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಲಾಗಿದ್ದು, 14 ಚೆಕ್ ಪೋಸ್ಟ್ ಗಳಲ್ಲಿ ಪ್ರತಿದಿನ 10 ರಿಂದ 12 ಕೋಟಿ ರೂ ವಸೂಲಿ ದಂಧೆ ನಡೆಸಲಾಗುತ್ತಿದೆ ಎಂದು ಇದೇ ವೇಳೆ ರೇವಣ್ಣ ಆರೋಪ ಮಾಡಿದ್ದಾರೆ.