ಅಪರಿಚಿತ ಗುಂಡಿನ ದಾಳಿ | ಓರ್ವ ಯೋಧ ಹುತಾತ್ಮ
ಜಮ್ಮು-ಕಾಶ್ಮೀರ: ಅಪರಿಚಿತು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದರೆ
ಶ್ರೀನಗರದ ಮೈಸಿಮಾ ಪ್ರದೇಶದಲ್ಲಿ ಸೋಮವಾರ ಬಂದೂಕುಧಾರಿಗಳು ಏಕಾಏಕಿ ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಗಾಯಗೊಂಡಿದ್ದು, ಒಬ್ಬ ಸಿಆರ್ಪಿಎಫ್ ಯೋಧ ವೀರಮರಣರಾಗಿದ್ದಾರೆ
ಗುಂಡಿನ ದಾಳಿಯಲ್ಲಿ ಗಾಯಗೊಂಡ ಯೋಧರನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಂಡಿನ ದಾಳಿ ಮಾಡಿದ ದುಷ್ಕರ್ಮಿಗಳಿಗಾಗಿ ಭದ್ರತೆ ಪಡೆಗಳು ಶೋಧ ಕಾರ್ಯ ಆರಂಭಿಸಿದ್ದು,ಇಡೀ ಪ್ರದೇಶವನ್ನು ಸುತ್ತುವರಿದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.








