ನವದೆಹಲಿ: ದೇಶಾದ್ಯಂತ ಹೇರಲಾಗಿರುವ ಲಾಕ್‍ಡೌನ್‍ನ್ನು ಬಹುತೇಕ ಸಡಿಲಗೊಳಿಸಿರುವ ಕೇಂದ್ರ ಸರ್ಕಾರ, ಅನ್‍ಲಾಕ್ 2.0ಗೆ ಸಿದ್ದತೆ ನಡೆಸಿದೆ.
ಆನ್‍ಲಾಕ್-2.0ನಲ್ಲಿ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ, ಶಾಲೆ ಹಾಗೂ ಮೆಟ್ರೋ ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆ ಇದೆ. ಈಗಾಗಲೇ ಅನ್‍ಲಾಕ್-2.0 ಮಾರ್ಗಸೂಚಿ ಸಿದ್ಧಪಡಿಸುತ್ತಿರುವ ಕೇಂದ್ರ ಸರ್ಕಾರ, ಮುಂದಿನ ವಾರ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
ಮೆಟ್ರೋ ರೈಲುಗಳು ಓಡುತ್ತವಾ..?

ಮೆಟ್ರೋ ರೈಲುಗಳು ಓಡುತ್ತವಾ..?
ಅನ್‍ಲಾಕ್-2.0ನಲ್ಲಿ ಮೆಟ್ರೋ ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ಚಿಂತನಸೆ ನಡೆಸಿದೆ. ಆದರೆ, ಮೆಟ್ರೋ ಸಂಚಾರ ಇರುವ ಮಹಾನಗರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ರಾಜಧಾನಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೆ, ಮುಂಬೈನಲ್ಲಿ ಸುಧಾರಣೆ ಕಂಡು ಬರುತ್ತಿದೆ.
ಚೆನ್ನೈನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಂಪ್ಲೀಟ್ ಲಾಕ್‍ಡೌನ್ ಮಾಡಿದ್ದರೆ, ಬೆಂಗಳೂರಿನಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಆರಂಭಿಸಬೇಕೇ ಬೇಡವೇ ಎಂಬ ಗೊಂದಲಲ್ಲಿದೆ.
ಶಾಲೆಗಳು ಆರಂಭವಾಗುತ್ತವಾ..!

ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ಆರಂಭಿಸಲು ಅನ್‍ಲಾಕ್-2.0ನಲ್ಲಿ ಅನುಮತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಆದರೆ, ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ಕೊಡಲು ಸರ್ಕಾರಗಳು ಹಿಂದೇಟು ಹಾಕಿವೆ. ಕರ್ನಾಟಕ ಹೊರತುಪಡಿಸಿ ಎಲ್ಲಾ ರಾಜ್ಯಗಳು ಎಸ್‍ಎಸ್‍ಎಲ್‍ಸಿ, ಪಿಯುಸಿ ಹಾಗೂ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿವೆ. ಸಿಬಿಎಸ್‍ಸಿ ಕೂಡ 10 ಮತ್ತು ದ್ವಿತೀಯ ಪರೀಕ್ಷೆಗಳನ್ನು ರದ್ದು ಮಾಡಿದೆ. ಹೀಗಾಗಿ ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬ ಗೊಂದಲದಲ್ಲಿ ಕೇಂದ್ರ ಸರ್ಕಾರವಿದೆ.
ವಿದೇಶಕ್ಕೆ ವಿಮಾನ ಹಾರಾಟ..!
ವಿದೇಶಗಳಿಗೆ ಕೆಲ ಖಾಸಗಿ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲು ಕೇಂದ್ರ ಸರ್ಕಾರಕ್ಕೆ ಮನಸ್ಸು ಇದ್ದರೂ, ಅಮೆರಿಕ, ಗಲ್ಫ್ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ.
ವಂದೇ ಭಾರತ್ ಮಿಷನ್ ಅಡಿ ವಿದೇಶದಲ್ಲಿರುವ ಭಾರತೀಯರನ್ನು ವಿಶೇಷ ವಿಮಾನಗಳ ಮೂಲಕ ಕರೆಸಿಕೊಂಡ ಭಾರತದ ಕ್ರಮಕ್ಕೆ ಅಮೆರಿಕ ತೀವ್ರ ವಿರೋಧ ವ್ಯಕ್ತಪಡಿಸಿದೆ. ಭಾರತದ ವಿಮಾನಗಳು ಅಮೆರಿಕದಲ್ಲಿ ಇಳಿಸಲು ಅನುಮತಿ ಕೊಡುವುದಿಲ್ಲ ಎಂದು ಅಮೆರಿಕ ಗುಟುರು ಹಾಕಿದೆ.
ಅಮೆರಿಕದಂತೆ ಸೌದಿ ರಾಷ್ಟ್ರಗಳು ಸಹ ಭಾರತದ ವಿಮಾನಗಳ ಹಾರಾಟ ಪ್ಲ್ಯಾನ್‍ಗೆ ವಿರೋಧ ವ್ಯಕ್ತಪಡಿಸಿವೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಿಗೆ ವಿಮಾನ ಸಂಚಾರ ಆರಂಭಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಹೀಗಾಗಿ ಕೇಂದ್ರ ಸರ್ಕಾರ ಸಾಕಷ್ಟು ಗೊಂದಲದಲ್ಲಿದೆ. ಅನ್‍ಲಾಕ್ 2.0 ಮೂಲಕ ಉದ್ಯೋಗಾವಕಾಶ ಹೆಚ್ಚುಸುವುದು ಕೇಂದ್ರದ ಗುರಿಯಾಗಿದೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ಉದ್ಯೋಗವಕಾಶ ಹೆಚ್ಚಿಸಲು ಆತ್ಮನಿರ್ಭರ್ ಭಾರತ್ ಯೋಜನೆ ಆರಂಭಿಸಿದ್ದು, ಕೈಗಾರಿಗೆಗಳಲ್ಲಿ ಸ್ಥಳೀಯರಿಗೆ ಕೆಲಸ ಸಿಗುವಂತಾಗಬೇಕು ಎಂಬುದು ಅನ್‍ಲಾಕ್-2.0 ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.








