ನವದೆಹಲಿ: ಕೇಂದ್ರ ಸರ್ಕಾರ ಅನ್‍ಲಾಕ್ 4.0 ಮಾರ್ಗಸೂಚಿ ಪ್ರಕಟಿಸಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಆದರೆ, ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪುನಾರಂಭಿಸಲು ರೆಡ್ ಸಿಗ್ನಲ್ ಕೊಟ್ಟಿದೆ.
ಶಾಲಾ-ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡದೇ ಹೋದರೂ ಕೆಲ ವಿನಾಯಿತಿಗಳನ್ನು ನೀಡಿ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆಪ್ಟೆಂಬರ್ 7ರಿಂದ ಗ್ರೇಡೆಡ್ ಮಾದರಿಯಲ್ಲಿ ಮೆಟ್ರೋ ರೈಲುಗಳ ಸಂಚಾರಕ್ಕೆ 4.0 ಮಾರ್ಗಸೂಚಿಯಲ್ಲಿ ಅವಕಾಶ ನೀಡಲಾಗಿದೆ.
ಇದರ ಜತೆಗೆ ಸೆ.21ರಿಂದ ಹಲವು ವಿನಾಯಿತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ
ಅವುಗಳ ವಿವರ ಕೆಳಗಿನಂತಿದೆ.
1. 9ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅಗತ್ಯವಿದ್ದರೆ ಶಾಲಾ-ಕಾಲೇಜಿಗೆ ಭೇಟಿ ನೀಡಬಹುದು. ಶಿಕ್ಷಕರು ಹಾಗೂ ಉಪನ್ಯಾಸಕರಿಂದ ಗೊಂದಲ ಬಗೆಹರಿಸಿಕೊಳ್ಳಬಹುದು. ಆದರೆ ತರಗತಿ ನಡೆಸುವಂತಿಲ್ಲ.
2. ಪಿಹೆಚ್‍ಡಿ ಸೇರಿದಂತೆ ಉನ್ನತ ಶಿಕ್ಷಣ ಪಡೆಯುವ ತಾಂತ್ರಿಕ ವಿದ್ಯಾರ್ಥಿಗಳು ತುರ್ತು ಪ್ರಯೋಗಾಲಯ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬಹುದು.
3. ಶೈಕ್ಷಣಿಕ ಚಟುವಟಿಕೆ, ಕ್ರೀಡಾ ಚಟುವಟಿಕೆ, ಸಾಂಸ್ಕøತಿಕ ಹಾಗೂ ರಾಜಕೀಯ ಸಭೆ-ಸಮಾರಂಭಗಳನ್ನು ಆಯೋಜಿಸಲು ಅನುಮತಿ ನೀಡಲಾಗಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ 100 ಜನರಿಗಿಂತ ಹೆಚ್ಚು ಸೇರುವುದನ್ನು ನಿರ್ಬಂಧಿಸಲಾಗಿದೆ.
4. ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಥರ್ಮಲ್ ಸ್ಕ್ಯಾನರ್ ಮಾಡುವುದು ಕಡ್ಡಾಯ ಮಾಡಲಾಗಿದೆ.
5. ಇನ್ನು ಮುಂದೆ ಯಾವುದೇ ರಾಜ್ಯಗಳು ಕಂಟೇನ್‍ಮೆಂಟ್ ಝೋನ್ ಹೊರತುಪಡಿಸಿದ ಪ್ರದೇಶಗಳಲ್ಲಿ ಅಂದರೆ ನಗರ, ಪಟ್ಟಣ, ಹಳ್ಳಿಗಳಲ್ಲಿ ಲಾಕ್‍ಡೌನ್ ಆದೇಶ ಮಾಡುವಂತಿಲ್ಲ.

6. ತೆರೆದ ಥಿಯೇಟರ್‍ಗಳನ್ನು(ಓಪನ್ ಏರ್ ಥಿಯೇಟರ್) ತೆರೆಯಲು ಅನುಮತಿ ನೀಡಿರುವ ಕೇಂದ್ರ ಸರ್ಕಾರ, ಸಿನಿಮಾ ಮಂದಿರ, ಸ್ವಿಮ್ಮಿಂಗ್ ಪೂಲ್, ಮನರಂಜನಾ ಪಾರ್ಕ್‍ಗಳನ್ನು ತೆರೆಯಲು ಅನುಮತಿ ಕೊಟ್ಟಿಲ್ಲ.
7. ವಿದೇಶಿ ವಿಮಾನ ಪ್ರಯಾಣವನ್ನು ನಿರ್ಬಂಧಿಸಲಾಗಿದೆ.








