2022ರ ಫೆಬ್ರವರಿಯಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ
ಬೆಂಗಳೂರು : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಿರ್ಮಾಣವಾಗುತ್ತಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಲೋಹದ ಪ್ರತಿಮೆ ಮುಂದಿನ ವರ್ಷ ಫೆಬ್ರವರಿಯಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಇಂದು ಕೆಂಪೇಗೌಡರ 512 ನೇ ಜಯಂತಿ ಹಿನ್ನಲೆಯಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಅವರು, ಕೆಂಪಾಪುರ ಗ್ರಾಮಕ್ಕೆ ಭೇಟಿ ನೀಡಿ ಕೆಂಪೇಗೌಡ ಸಮಾಧಿಗೆ ಪೂಜೆ ಸಲ್ಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಬರುವ ಫೆಬ್ರವರಿ ಮಾರ್ಚ್ ನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಲೋಹದ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗುವುದು.
ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ, ಹೀಗಾಗಿ ಸಮಾಧಿ ಸ್ಥಳ, ಕೆಂಪಾಪುರ ಕೆರೆಯನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.









