ಹೈಕಮಾಂಡ್ ಭೇಟಿಯಾಗಲು ದೆಹಲಿಗೆ ತೆರಳಿದ ಯೋಗಿ – Saaksha Tv
ನವದೆಹಲಿ : ಉತ್ತರ ಪ್ರದೇಶದಲ್ಲಿ ಬಿಜೆಪಿ ಅಭೂತ ಪೂರ್ವ ಗೆಲವು ಸಾಧಿಸಿದ ನಂತರ, ಸರಕಾರ ರಚಿಸಲು ಯೋಗಿ ಆದಿತ್ಯನಾಥ್ ಇಂದು ಹೈಕಾಮಾಂಡ್ ಭೇಟಿಯಾಗಲು ದೆಹಲಿಗೆ ಭೇಟಿ ನೀಡಲಿದ್ದಾರೆ
ಲಖನೌನಿಂದ ಹಿಂಡನ್ ವಿಮಾನ ನಿಲ್ದಾಣಕ್ಕೆ ತೆರಳಲಿರುವ ಯೋಗಿ ಅಲ್ಲಿಂದ ರಸ್ತೆ ಮಾರ್ಗವಾಗಿ ತೆರಳಿ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಬಿಜೆಪಿ ಹೈ ನಾಯಕರ ಜೊತೆ ರಾಜ್ಯದಲ್ಲಿ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಯಾವಾಗ ನಡೆಯಬೇಕು ಎಂಬ ಕುರಿತು ಮತ್ತು ನೂತನ ಸಚಿವ ಸಂಪುಟ ರಚಿಸುವ ಕುರಿತು ಚರ್ಚೆ ಮಾಡಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಯೋಗಿ ಆದಿತ್ಯನಾಥ್ ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಗೆಲುವಿನ ನಂತರ ಆದಿತ್ಯನಾಥ್ ಶುಕ್ರವಾರ ಲಖನೌದಲ್ಲಿರುವ ಪಕ್ಷದ ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಸಭೆ ನಡೆಸಿ, ಈಗಾಗಲೇ ಸಂಪುಟ ರಚನೆ ಬಗ್ಗೆ ಮಾತುಕತೆ ನಡೆಸಿದ್ದಾರೆ.