ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ವಿರುದ್ಧ ದಿನಕ್ಕೊಂದು ಪ್ರವಾರ ನಡೆಸುತ್ತಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೆಂಡಾಮಂಡಲರಾಗಿದ್ದಾರೆ.
ಸರಣಿ ಟ್ಟೀಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, 27 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿಯ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಇರಲು ಹೇಗೆ ಸಾಧ್ಯ. ಯೋಗಿ ಆದಿತ್ಯನಾಥರಿಂದಗಿ ಕಾವಿಬಟ್ಟೆಗೆ ಕಳಂಕ ಬಂದಿದೆ. ಈಗಾಗಿ ಅವರು ಕಾವಿ ಬಟ್ಟೆ ಬದಲಾಯಿಸುವುದು(remove saffrone cloth) ಒಳ್ಳೆಯದು ಎಂದಿದ್ದಾರೆ.
`ಪಂಚೇಂದ್ರಿಯ ಕಳೆದುಕೊಂಡ ಮರಗಟ್ಟಿದ ಸರ್ಕಾರ’
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೆರೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡಿದರೆ ನಷ್ಟ ಭರಿಸಲಾಗದು. ನಮ್ಮ ಸರ್ಕಾರ ಒಂದು ಹೆಕ್ಟೇರ್ ಗೆ ರೂ.25,000 ಪರಿಹಾರ ಕೊಟ್ಟಿತ್ತು. ಅದೇ ರೀತಿ ಕೊಡಬೇಕು. ಆದರೆ, ಕಳೆದ ವರ್ಷದ ಪ್ರವಾಹದ ಹಾನಿಗೆ ಇಲ್ಲಿಯವರೆಗೆ ಪರಿಹಾರ ನೀಡದ ರಾಜ್ಯ ಸರ್ಕಾರದಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಸಿದ್ದರಾಮಯ್ಯ ಟೀಕಾ ಪ್ರಹಾರ ನಡೆಸಿದ್ದಾರೆ.
ಒಂದು ಅಂದಾಜಿನ ಪ್ರಕಾರ ಸುಮಾರು 6.25 ಲಕ್ಷ ಎಕರೆಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಕೇವಲ ಬೆಳೆ ಹಾನಿಯಿಂದಲೇ 1,500ಕೋಟಿ ರೂ. ನಷ್ಟವಾಗಿದೆ. 1700 ಮನೆಗಳು ಬಿದ್ದಿವೆಯಂತೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಲ್ಲಿಯವರೆಗೆ ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ.
ರೈತರು ಮುಂಗಾರು ಬೆಳೆಯನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ನೆರೆ ನೀರಿನ ಶೀತ ಇಳಿಯದೆ ಹಿಂಗಾರು ಬಿತ್ತನೆ ಮಾಡೋ ಹಾಗಿಲ್ಲ. ಎರಡೂ ಬೆಳೆಗಳನ್ನು ಕಳೆದುಕೊಂಡಿರುವ ರೈತರ ಕಷ್ಟಗಳನ್ನು ಕೇಳುವವರೇ ಇಲ್ಲ. ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿಹೋಗಿರುವ ಸರ್ಕಾರ ಎಂದು ಆರೋಪಿಸಿದ್ದಾರೆ.
ಇಲ್ಲಿಯವರೆಗೆ ಸರ್ಕಾರ ಪ್ರವಾಹದ ನಷ್ಟದ ಸಮೀಕ್ಷೆನೇ ಮಾಡಿಲ್ಲ. ವಿಮಾನದಲ್ಲಿ ನೋಡಿ ಹೋದರು, ಕಂದಾಯ ಸಚಿವರು ಕಾಟಾಚಾರಕ್ಕೆ ಭೇಟಿ ನೀಡಿದರು. ಜಿಲ್ಲಾ ಸಚಿವರಾಗಲಿ, ಅಧಿಕಾರಿಗಳು ಜನರ ಬಳಿ ಹೋಗಿಯೇ ಇಲ್ಲ. ಇಡೀ ಸರ್ಕಾರವೇ ನೆರೆಯಲ್ಲಿ ಕೊಚ್ಚಿಕೊಂಡು ಹೋಗಿರುವಂತಹ ದುಸ್ಥಿತಿ ಇದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಶೇಷ ಅಧಿವೇಶನ ಕರೆಯಲು ಸಿದ್ದು ಆಗ್ರಹ
ಒಂದೆಡೆ ಕೊರೊನಾ, ಇನ್ನೊಂದೆಡೆ ಪ್ರವಾಹ, ಮತ್ತೊಂದೆಡೆ ಹಾಳಾಗಿ ಹೋಗಿರುವ ಶಾಂತಿ ಮತ್ತು ಸುವ್ಯವಸ್ಥೆ,
ಇವೆಲ್ಲದರ ನಡುವೆ ಭ್ರಷ್ಟಾಚಾರದ ಹಗರಣಗಳು. ಈ ಬಗ್ಗೆ ಚರ್ಚೆಗೆ ನಡೆಸಲು ವಿಧಾನಮಂಡಲವೇ ಸೂಕ್ತ ವೇದಿಕೆ. ಆದರೆ ವಿರೋಧಪಕ್ಷಗಳನ್ನು ಎದುರಿಸುವ ಧೈರ್ಯವೇ ರಾಜ್ಯ ಸರ್ಕಾರಕ್ಕೆ ಇಲ್ಲ.
ಕಳೆದ ಮೂರು ತಿಂಗಳುಗಳ ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯದ ರೈತರು ಬೆಳೆ-ಮನೆ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಬಗ್ಗೆ ವಿಸ್ತøತವಾಗಿ ಚರ್ಚೆ ನಡೆಸಲು ತಕ್ಷಣ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಸಿಎಂ ಯಾರೆಂದು ಹೈಕಮಾಂಡ್ ನಿರ್ಧಾರ
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ನಿರ್ಧರಿಸುತ್ತದೆ. ಉಳಿದವರು ಏನೇ ಹೇಳಿದರೂ ಇದೇ ಅಂತಿಮ ಸತ್ಯ. ಇದನ್ನು ನಾನೇ ಹೇಳುತ್ತಿರುವುದರಿಂದ ಇದರ ಬಗ್ಗೆ ಬೇರೆ ಚರ್ಚೆ ಬೇಡ.
ಕಾಂಗ್ರೆಸ್ ಪಕ್ಷದಲ್ಲಿ ಯಾವ ಭಿನ್ನಮತವೂ ಇಲ್ಲ, ಅವೆಲ್ಲ ನಡೆಯುತ್ತಿರುವುದು ಬಿಜೆಪಿಯಲ್ಲಿ. ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ದ ಕ್ರಮಕೈಗೊಳ್ಳುವ ತಾಕತ್ ಇಲ್ಲದ ಪಕ್ಷಕ್ಕೆ ನಮ್ಮ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel