ಯುಪಿ ಎಲೆಕ್ಷನ್ – ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ….
ಉತ್ತರ ಪ್ರದೇಶದ ಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗಾಗಿ ಮೊದಲ ಹಂತದ ಚುನಾವಣೆಯಲ್ಲಿ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು 30 ನಾಯಕರ ಹೆಸರನ್ನ ಆಯ್ಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಸೇರಿದಂತೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್ ಸ್ಮೃತಿ ಇರಾನಿ ಮುಖ್ತಾರ್ ಅಬ್ಬಾಸ್ ನಖ್ವಿ ದಿನೇಶ್ ಶರ್ಮ್ ಕೇಶವ್ ಪ್ರಸಾದ್ ಮೌರ್ಯ ಸಂಜೀವ್ ಬಲ್ಯಾನ್ ರಾಧಾ ಮೋಹನ್ ಸಿಂಗ್ ಸೇರಿದಂತೆ ಇನ್ನಿತರ ಹೆಸರುಗಳಿವೆ.
ಆದರೆ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಪಕ್ಷದ ಸಂಸದರಾದ ಮನೇಕಾ ಗಾಂಧಿ ಮತ್ತು ವರುಣ್ ಗಾಂಧಿ ಇಬ್ಬರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.
ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ.








