UP Election – ಶಾಂತಿಯುತ ಮತದಾನ ನಡೆಸಿದ್ದಕ್ಕೆ CM ಯೋಗಿ ಅಭಿನಂದನೆ…
ಸೋಮವಾರ ದೇಶದ ಎಲ್ಲಾ ಏಳು ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚುನಾವಣಾ ಆಯೋಗ, ಅಧಿಕಾರಿಗಳು, ನೌಕರರು, ಭದ್ರತಾ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ. ಮತದಾರರಿಗೆ ಧನ್ಯವಾದಗಳನ್ನ ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ಮತ್ತು ವ್ಯವಸ್ಥೆಗೆ ಸಂಬಂಧಿಸಿದ ಎಲ್ಲಾ ಸರ್ಕಾರಿ ಸಿಬ್ಬಂದಿ ಸೇರಿದಂತೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಎಂದು ಗೋರಖನಾಥ ದೇಗುಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ತಿಳಿಸಿದ್ದಾರೆ.
ಪ್ರತಿ ಜಿಲ್ಲೆಯ ಪ್ರತಿ ಸಭೆಯ ವರದಿಯನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಮಾಧ್ಯಮಗಳು ಮಾಡುತ್ತಿರುವ ಕಾರ್ಯಕ್ಕಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳ ಎಲ್ಲಾ ಪ್ರತಿನಿಧಿಗಳಿಗೆ ಧನ್ಯವಾದಗಳು ಎಂದು ಯೋಗಿ ಆದಿತ್ಯಾನಾಥ್ ಹೇಳಿದರು. ಪ್ರಜಾಪ್ರಭುತ್ವದ ಮಹಾನ್ ಹಬ್ಬವನ್ನು ಮಹಾ ಉತ್ಸವವನ್ನಾಗಿಸುವಲ್ಲಿ ನೀಡಿರುವ ಕೊಡುಗೆ ಅತ್ಯಂತ ಶ್ಲಾಘನೀಯ ಎಂದು ಹೇಳಿದರು.