UP Election – ಅಖಿಲೇಶ್ ಯಾದವ್ ಬೆಂಬಲಿಸಲು ಯುಪಿಗೆ ತೆರಳಲಿದ್ದಾರೆ ಮಮತಾ
ಇದೀಗ ತೃಣಮೂಲ ಕಾಂಗ್ರೆಸ್ ಕೂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಧುಮುಕಲಿದೆ. ಈ ಬಾರಿಯ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ವರಿಷ್ಠೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಆದರೆ, ಅಖಿಲೇಶ್ ಯಾದವ್ ಅವರನ್ನು ಬೆಂಬಲಿಸುವುದಾಗಿ ಭರವಸೆ ನೀದ್ದಾರೆ. 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಖಚಿತ ಎಂದು ಮಮತಾ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಫೆಬ್ರವರಿ 8 ರಂದು ಉತ್ತರ ಪ್ರದೇಶಕ್ಕೆ ಬರಲಿದ್ದಾರೆ. ನಾನು ಉತ್ತರ ಪ್ರದೇಶ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಆದರೆ ಫೆಬ್ರವರಿ 8 ರಂದು ಅಖಿಲೇಶ್ ಯಾದವ್ ಅವರನ್ನು ಬೆಂಬಲಿಸಲು ಉತ್ತರ ಪ್ರದೇಶಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದರು.
ಹಲವು ರಾಜ್ಯಗಳಿಂದ ಚುನಾವಣೆಗೆ ಸ್ಪರ್ಧಿಸುತ್ತೇವೆ ಈಗಾಗಲೇ ಗೋವಾದಿಂದ ಆರಂಭವಾಗಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ ಬಂಗಾಳದ 42 ರಲ್ಲಿ 42 ಸ್ಥಾನಗಳನ್ನು ತರಲು ನಾವು ನಮ್ಮನ್ನು ಬಲಪಡಿಸಿಕೊಳ್ಳಲು 2 ವರ್ಷಗಳು ನಮಗೆ ಇವೆ. 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿಯೂ ತಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ಮಮತಾ ಹೇಳಿದ್ದಾರೆ.
ಇದಕ್ಕೂ ಮುನ್ನ ಬುಧವಾರ ಪಕ್ಷದ ಮುಖ್ಯಸ್ಥೆಯಾಗಿ ಮಮತಾ ಅವಿರೋಧವಾಗಿ ಆಯ್ಕೆಯಾದರು.








