UP Election – ನೋಯ್ಡಾದಲ್ಲಿ ಮನೆ ಮನೆ ಪ್ರಚಾರ ಆರಂಭಿಸಿದ ಪ್ರಿಯಾಂಕಾ ಗಾಂಧಿ…
ಫೆಬ್ರವರಿ 10 ರಿಂದ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಆರಂಭಗಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಸೋಮವಾರದಿಂದ ನೋಯ್ಡಾದಿಂದ ಮನೆ ಮನೆಗೆ ಪ್ರಚಾರ ಆರಂಭಿಸಿದ್ದಾರೆ.
ನೋಯ್ಡಾದಲ್ಲಿ ಸೆಕ್ಟರ್ 26ರಲ್ಲಿರುವ ಕಾಲಿಬರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಪ್ರಿಯಾಂಕಾ ಚುನಾವಣಾ ಪ್ರಚಾರವನ್ನು ಆರಂಭಿಸಿದರು. ಇದಾದ ನಂತರ ಅವರು ನೋಯ್ಡಾ ಸೆಕ್ಟರ್-26 ಕ್ಲಬ್‌ನಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು
ನೋಯ್ಡಾದಿಂದ ಪಂಖೂರಿ ಪಾಠಕ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಪ್ರಿಯಾಂಕಾ ಗಾಂಧಿ ಇಂದು ನೋಯ್ಡಾಗೆ ಆಗಮಿಸಿ ತಮಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಇದು ಪ್ರಿಯಾಂಕಾ ಗಾಂಧಿ ಅವರ ಮೊದಲ ನೇರ ಅಭಿಯಾನವಾಗಿರುವುದು ವಿಶೇಷ. ಇದಕ್ಕೂ ಮೊದಲು, ಅವರು ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಜನರೊಂದಿಗೆ ಸಂವಹನ ನಡೆಸಿದ್ದಾರೆ.
ಇದಾದ ಬಳಿಕ ಪಂಖೂರಿ ಪಾಠಕ್ ಪರ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದ್ದಾರೆ. ‘ಲಡ್ಕಿ ಹೂಂ, ಲಡ್ ಸಕ್ತಿ ಹೂಂ’ ಅಭಿಯಾನದ ಭಾಗವಾಗಿ ಪ್ರಿಯಾಂಕಾ ಮಹಿಳೆಯರ ಜೊತೆ ಪ್ರತ್ಯೇಕವಾಗಿ ಮಾತನಾಡಲಿದ್ದಾರೆ.








