UP Election: 3ನೇ ಹಂತದ ಚುನಾವಣೆ – ಮಧ್ಯಾಹ್ನ 1 ಗಂಟೆಯವರೆಗೆ 35 % ಮತದಾನ
ಉತ್ತರ ಪ್ರದೇಶದ ಏಳು ಹಂತಗಳ ವಿಧಾನಸಭೆ ಚುನಾವಣೆಯಲ್ಲಿ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದೆ. ಉತ್ತರ ಪ್ರದೇಶದ ಒಟ್ಟು 59 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಇದು ಅತ್ಯಂತ ನಿರ್ಣಾಯಕ ಸುತ್ತಿನ ಚುನಾವಣೆಯಾಗಿದೆ. ಈ ಹಂತ ರಾಜ್ಯವು ಸಾಗುತ್ತಿರುವ ರಾಜಕೀಯ ದಿಕ್ಕನ್ನು ಸೂಚಿಸುತ್ತದೆ.
ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್‌ಪುರಿ, ಫರೂಕಾಬಾದ್, ಕನ್ನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್, ಜಲೌನ್, ಝಾನ್ಸಿ, ಲಲಿತ್‌ಪುರ, ಹಮೀರ್‌ಪುರ್ ಮತ್ತು ಮಹೋಬಾ – 16 ನಿರ್ಣಾಯಕ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ., ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿ ಅಭ್ಯರ್ಥಿ ಮತ್ತು ಕೇಂದ್ರ ಸಚಿವ ಎಸ್ಪಿ ಸಿಂಗ್ ಬಘೇಲ್ ವಿರುದ್ಧ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. UP Election 2022 : Voter turnout at 35.88% till 1pm; police, BJP workers clash in Kanpur.
ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಮೂರನೇ ಹಂತದಲ್ಲಿ ಒಟ್ಟು 627 ಅಭ್ಯರ್ಥಿಗಳು ಕಣದಲ್ಲಿದ್ದು, 20 ಮಿಲಿಯನ್ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.35.88ರಷ್ಟು ಮತದಾನವಾಗಿದೆ.








