UP Election – 4 ನೆ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ . ಮತ್ತೆ ಮಹಿಳೆಯರಿಗೆ ಮಣೆ..
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಕಾಂಗ್ರೆಸ್ ಭಾನುವಾರದಂದುಪ್ರಕಟಿಸಿದೆ. ಒಟ್ಟು 61 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದ್ದು, ಈ ಭಾರಿಯೂ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. 24 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್ ದಕ್ಕಿದೆ.
ಒಟ್ಟು ಅಭ್ಯರ್ಥಿಗಳ ಪೈಕಿ ಶೇಕಡ 40 ಮಹಿಳಾ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಹಿಂದೆ ಹೇಳಿದ್ದರು. ರಾಯ್ ಬರೇಲಿ, ಅಮೇಠಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿರುವ ಅಭ್ಯರ್ಥಿಗಳ ಹೆಸರು ಪ್ರಕಟ ಮಾಡಿದೆ.
2017ರ ಉನ್ನಾವೊ ಸಂತ್ರಸ್ತೆಯ ತಾಯಿ ಆಶಾ ದೇವಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಮೊದಲ ಪಟ್ಟಿಯಲ್ಲಿ 50 ಮಹಿಳಾ ಅಭ್ಯರ್ಥಿಗಳಿದ್ದರು. ಎರಡನೇ ಪಟ್ಟಿಯಲ್ಲಿ 16 ಜನ ಮಹಿಳೆಯರು ಹಾಗೂ ಮೂರನೇ ಪಟ್ಟಿಯಲ್ಲಿ 37 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ.
ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲು ನಡೆದ ಹೋರಾಟದ ನೇತೃತ್ವ ವಹಿಸಿದ್ದ ಪೂನಂ ಪಾಂಡೆ ಅವರಿಗೆ ಷಹಜಹಾನ್‍ಪುರದಿಂದ ಟಿಕೆಟ್ ನೀಡಿದ್ದಾರೆ. ಸಂಘ ಸಂಸ್ಥೆಗಳಿಂದ ಹಿಡಿದು ಪತ್ರಕರ್ತರ ವರೆಗೂ, ಮಹಿಳಾ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಮಣೆ ಹಾಕಿದೆ.