ಸೀತಾಪುರ್: 13 ವರ್ಷದ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದು, ಇತರ ನಾಲ್ವರು ಈ ಕೃತ್ಯವನ್ನು ಚಿತ್ರೀಕರಿಸಿದ ಘಟನೆ ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಆರು ಮಂದಿಯನ್ನು ಬಂಧಿಸಲಾಗಿದ್ದು, ಬುಧವಾರ ಮಧ್ಯಾಹ್ನ 2 ಗಂಟೆಯ ಹೊತ್ತಿದೆ ಮಿಸ್ರಿಖ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ.
ಸಂತ್ರಸ್ತೆ ಬಹಿರ್ದೆಸೆಗೆ ಹೋಗಿ ಮನೆಗೆ ವಾಪಾಸಾಗುತ್ತಿದ್ದ ಹೊತ್ತಲ್ಲಿ 6 ಮಂದಿ ಯುವಕರು ಬಲವಂತವಾಗಿ ಕರೆದೊಯ್ದು ಶಾಲಾ ಕಟ್ಟಡವೊಂದರ ಬಳಿ ಅತ್ಯಾಚಾರವೆಸಗಿದ್ದಾರೆ. ಇನ್ನು ಆರೋಪಿಗಳಲ್ಲಿ ಇಬ್ಬರು ಸಂತ್ರಸ್ತೆಯ ಅದೇ ಊರಿನವರಾದ್ದು, ಇತರ ನಾಲ್ವರು ಅತ್ಯಾಚಾರ ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಅಲ್ಲದೆ ಈ ಬಗ್ಗೆ ಯಾರಲ್ಲೂ ಹೇಳಬಾರದು ಎಂದು ಆರೋಪಿಗಳು ಸಂತ್ರಸ್ತೆಗೆ ಬೆದರಿಕೆಯೊಡ್ಡಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಆರು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಎಲ್.ಆರ್. ಕುಮಾರ್ ಹೇಳಿದ್ದಾರೆ.








