ರೈತರಿಂದಲೇ ಟೊಮೇಟೋ ಖರೀದಿಸಿ – ಅಗತ್ಯ ಇದ್ದವರಿಗೆ ಹಂಚಿದ ರಿಯಲ್ ಸ್ಟಾರ್
ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಈ ರೀತಿ ಸಹಾಯ ಮಾಡ್ತಿರುವವರಲ್ಲಿ ತಮ್ಮ ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಉಪೇಂದ್ರ ಅವರು ಸಹ ಒಬ್ಬರು .. ಉಪೇಂದ್ರ ಕೊರೊನಾ ಸಂಕಷ್ಟದ ಸಮಯದಲ್ಲಿ ಅನೇಕ ಪುಣ್ಯ ಕೆಲಸಗಳನ್ನ ಮಾಡ್ತಿದ್ದಾರೆ. ಸಿನಿಮಾರಂಗದ ಬಡವರಿಗೆ ಸಹಾಯ ಮಾಡ್ತಿದ್ದು, ಅವರಿಗೆ ಈಗಾಗಲೇ ಸಾಧುಕೋಕಿಲ, ಶೋಭರಾಜ್ ಸೇರಿದಂತೆ ಅನೇಕರು ಸಾಥ್ ನೀಡಿದ್ದರು.. ಸಿನಿಕಾರ್ಮಿಕರಿಗೆ, ಬಡವರಿಗೆ ದಿನಸಿ ಕಿಟ್ಗಳನ್ನು ನೀಡುತ್ತಿದ್ದಾರೆ. ಇದರ ಜೊತೆಗೆ ಉಪೇಂದ್ರ ರೈತರ ಸಹಾಯಕ್ಕೂ ಧಾವಿಸಿದ್ದಾರೆ.
ಈಗ ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಅಗತ್ಯ ಇರುವವರಿಗೆ ಹಂಚುತ್ತಿದ್ದಾರೆ. ಈಗಾಗಲೇ ಸುಮಾರು 3 ಸಾವಿರ ಸಿನಿಕಾರ್ಮಿಕರ ಕುಟುಂಬಕ್ಕೆ ದಿನಸಿ ಕಿಟ್ ನೀಡಿದ್ದಾರೆ. ಇದೀಗ ಅವರು ರೈತರ ಸಂಕಷ್ಟಕ್ಕೂ ಮಿಡಿದಿದ್ದಾರೆ. ರೈತರು ಬೆಳೆದ ಬೆಳೆಯನ್ನು ನೇರವಾಗಿ ಅವರಿಂದಲೇ ಖರೀದಿಸುವುದಾಗಿ ಉಪ್ಪಿ ಹೇಳಿದ್ದರು. ಇದೀಗ ಅದು ಕೂಡ ನೆರವೇರಿದೆ.
ಕೊರೊನಾ ಲಾಕ್ಡೌನ್ನಿಂದಾಗಿ ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗದೇ ಎಷ್ಟೋ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಾನಿಗಳು ನೀಡಿರುವ ಹಣದಲ್ಲಿ ರೈತರಿಂದ ನೇರವಾಗಿ ತರಕಾರಿಗಳನ್ನು ಖರೀದಿ ಮಾಡಿ, ಅದನ್ನು ದಿನಸಿ ಕಿಟ್ಗಳ ಜೊತೆಗೆ ವಿತರಿಸುತ್ತೇವೆ ಎಂದು ಉಪೇಂದ್ರ ಹೇಳಿದ್ದರು.
ಇದೀಗ ಹಳ್ಳಿಗಳಿಂದ ನೇರವಾಗಿ ರೈತರಿಂದಲೇ ಟೊಮೇಟೋ ಖರೀದಿಸಿದ್ದಾರೆ. ಟೊಮೇಟೋ ತುಂಬಿದ ಟ್ರಕ್ ವೊಂದು ಈಗ ಉಪ್ಪಿ ಮನೆ ಮುಂದೆ ಬಂದು ನಿಂತಿದೆ. ಇದರ ಜೊತೆಗೆ ರೈತರಿಗೆ ಒಂದು ಮನವಿಯನ್ನು ಉಪೇಂದ್ರ ಮಾಡಿಕೊಂಡಿದ್ದಾರೆ.
ರೈತರ ಗಮನಕ್ಕೆ ನಿಮ್ಮೆಲ್ಲರ ಅದ್ಭುತ ಪ್ರತಿಕ್ರಿಯೆಗೆ ಧನ್ಯವಾದಗಳು. ಬೆಳೆದ ಬೆಳೆ ವ್ಯಾಪಾರವಾಗದೇ ನಾಶವಾಗುವ ಬೆಳೆಯನ್ನು ನಾವು ಕೊಂಡು, ಅದನ್ನು ಸಂಕಷ್ಟದಲ್ಲಿರುವ ಜನರಿಗೆ ಉಚಿತವಾಗಿ ಹಂಚುತ್ತಿದ್ದೇವೆ. ಇದು ವ್ಯಾಪಾರ ಎಂದು ದಯವಿಟ್ಟು ತಿಳಿಯಬೇಡಿ. ಅಂತಹ ಸಂಕಷ್ಟದಲ್ಲಿರುವ ರೈತರು ಸಂಪರ್ಕಿಸಿ ಎಂದು ಹೇಳಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.