ಕೊರೊನಾ ಸಂಕಷ್ಟ – ಪುಣ್ಯ ಕೆಲಸದಲ್ಲಿ ಉಪೇಂದ್ರ ಜೊತೆ ಕೈ ಜೋಡಿಸಿದ ಬಾಲನಟ..!
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಉಪೇಂದ್ರ , ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಈ ನಡುವೆ ಲಾಕ್ ಡೌನ್ ನಿಂದಾಗಿ ಸಿನಿಮಾರಂಗದ ಕಾರ್ಮಿಕರು ಸಂಕಷ್ಟ ಎದುರಿಸುತ್ತಿದ್ದು, ಉಪೇಂದ್ರ ಅವರು ಸಿನಿಮಾರಂಗದ ಕಲಾವಿದರು, ಕಾರ್ಮಿಕರು , ತಂತ್ರಜ್ನರಿಗೆ ಸಹಾಯ ಮಾಡುತ್ತಿದ್ದಾರೆ. ಉಪೇಂದ್ರ ಅವರ ಜೊತೆಗೆ ಶಾಸ್ತ್ರಿ ನಟಿ ಮಾನ್ಯಾ ,ಸಾಧುಕೋಕಿಲ , ಶೋಭ್ ರಾಜ್ ಸೇರುದಂತೆ ಅನೇಕರು ಕೈ ಜೋಡಿಸಿದ್ದು, ತಮ್ಮ ತಮ್ಮ ಕೈಲಾದ ದೇಣಿಗೆ ನೀಡಿ ಸಹಾಯ ಮಾಡ್ತಿದ್ಧಾರೆ.
ಇದೀಗ ಉಪ್ಪಿಗೆ ಬಾಲನಟ ಸಾಥ್ ನೀಡಿದ್ದು, ಕೊರೊನಾ ಸಂಕಷ್ಟದಲ್ಲಿರುವವರಿಗೆ ನೆರವಾಗಿದ್ಧಾರೆ. ಉಪ್ಪಿ ತಮ್ಮ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’ ಎಂಬ ಶಾರ್ಟ್ ಫಿಲಂನಲ್ಲಿ ನಟಿಸಿರುವ ಅನೀಶ್ ಸಾಗರ್ ನಾಯ್ಡು ಎಂಬ ಬಾಲನಟ ತನಗೆ ಬಂದ ಸಂಭಾವನೆ 10000 ರೂವನ್ನು ಸಂಕಷ್ಟದಲ್ಲಿರುವವರಿಗೆ ನೀಡುತ್ತಿದ್ದಾನೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.