Upendra | ಇಂದಿನಿಂದ UI ಸಿನಿಮಾ ಚಿತ್ರೀಕರಣ ಶುರು
ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ಅವರು ನಟಿಸಿ ನಿರ್ದೇಶಿಸುತ್ತಿರುವ ಸಿನಿಮಾ ಯುಐ ಸಿನಿಮಾದ ಶೂಟಿಂಗ್ ಶುರುವಾಗಿದೆ.
ಬರೋಬ್ಬರಿ ಏಳು ವರ್ಷಗಳ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.
ಹೀಗಾಗಿ ಸಿನಿಮಾದ ಮೇಲೆ ಸಾಕಷ್ಟು ಕುತೂಹಲ ಇದೆ.
ಯುಐ ಸಿನಿಮಾ ಪಾನ್ ಇಂಡಿಯಾ ಸಿನಿಮಾವಾಗಿದ್ದು, ಬಹುತೇಕ ಯುವ ತಂತ್ರಜ್ಞರೇ ಕೆಲಸ ಮಾಡುತ್ತಿದ್ದಾರೆ.

ಅಂದಹಾಗೆ ಕೆಲವು ದಿನಗಳ ಹಿಂದೆ ಬೆಂಗಳೂರಿನ ಬಂಡಿ ಮಾಂಕಾಳಮ್ಮ ದೇವಸ್ಥಾನದಲ್ಲಿ ಉಪೇಂದ್ರ ಅವರು ಸಿನಿಮಾದ ಮುಹೂರ್ತ ನೆರವೇರಿಸಿದ್ದರು.
ಈ ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಡಾಲಿ ಧನುಂಜಯ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಇನ್ನು ಈ ಸಿನಿಮಾ ಸ್ಟಾರ್ ಕಾಸ್ಟ್ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಯುಐ ಸಿನಿಮಾದ ಪೋಸ್ಟರ್ ಕೂಡ ಸಿನಿಮಾ ಪ್ರಿಯರ ತಲೆಗೆ ಹುಳ ಬಿಟ್ಟಿದೆ.








