ಬಿಇ, ಬಿ.ಟೆಕ್, ಎಲ್ಎಲ್ಬಿ, ಡಿಪ್ಲೊಮಾ ಸೇರಿದಂತೆ ಸ್ನಾತಕೋತ್ತರ ಪದವಿ ಪಾಸ್ ಮಾಡಿರುವ ಅಭ್ಯರ್ಥಿಗಳಿಗಾಗಿ ಕೇಂದ್ರ ಲೋಕಸೇವಾ ಆಯೋಗವು 261 ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ.
ಆಸಕ್ತರು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕನಿಷ್ಠ 30 ರಿಂದ 50 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಡಿಪ್ಲೊಮ / ಬಿಇ / ಬಿ.ಟೆಕ್ / ಎಂ.ಇ / ಎಂ.ಟೆಕ್ ಅನ್ನು ಏರೋನಾಟಿಕಲ್ ವಿಷಯಗಳು ಹಾಗೂ ಇತರೆ ಹುದ್ದೆಗೆ ಸಂಬಂಧಿಸಿದ ವಿಷಯಗಳಲ್ಲಿ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು.
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು ಶುಲ್ಕ ರೂ.25 ಪಾವತಿಸಬೇಕು. ಇತರೆ ಯಾವುದೇ ಕೆಟಗರಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಆನ್ಲೈನ್ ಮೂಲಕವೇ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಜುಲೈ 13 ಕೊನೆಯ ದಿನವಾಗಿದೆ. https://www.upsconline.nic.in/ora/VacancyNoticePub.php ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.








